

ಕಲಬುರಗಿ: ನಗರವೂ ದಿನೇ ದಿನೆ ಬೆಳೆಯುತ್ತಿದ್ದು, ಪ್ರಯಾಣಿಕರ ಸಂಚಾರವೂ ಹೆಚ್ಚಳವಾಗಿದೆ. ಸಾರ್ವಜನಿಕರ ಪ್ರಯಾಣಕ್ಕೆ ಕೇಂದ್ರ ಬಸ್ ನಿಲ್ದಾಣವನ್ನೇ ಆಶ್ರಯಿಸುವಂತಾಗಿದ್ದು, ಅದಕ್ಕೆ ಪರ್ಯಾಯವಾಗಿ ನಗರದ ಸುತ್ತಲಿನ ನಾಲ್ಕು ಪ್ರಮುಖ ವೃತ್ತಗಳಲ್ಲಿ ಮಿನಿ ಬಸ್ ನಿಲ್ದಾಣಗಳನ್ನು ನಿರ್ಮಿಸಬೇಕು ಎಂದು ಪಾಲಿಕೆ ಮಾಜಿ ಸದಸ್ಯ ಮಲ್ಲಿಕಾರ್ಜುನ ಪಾಟೀಲ್ ಕೆಕೆಆರ್‌ಟಿಸಿ ಡಿಸಿ ನಾರಾಯಣಪ್ಪಗೆ ಮನವಿ ಸಲ್ಲಿಸಿದರು.
ನಗರದ ಹುಮನಾಬಾದ್ ರಿಂಗ್ ರಸ್ತೆ ವೃತ್ತ, ರಾಮಮಂದಿರ ವೃತ್ತ, ಆಳಂದ ಚೆಕ್‌ಪೋಸ್ಟ್, ಬಿಲಗುಂದಿ ವೃತ್ತ (ಖರ್ಗೆ ಪೆಟ್ರೋಲ್ ಬಂಕ್ ವೃತ್ತ)ದಲ್ಲಿ ಮಿನಿ ಬಸ್ ನಿಲ್ದಾಣಗಳನ್ನು ನಿರ್ಮಿಸಬೇಕು. ಇದರಿಂದ ಜನರು ಬಿಸಿಲಿನಲ್ಲಿ ನಿಲ್ಲುವುದು ಸೇರಿ ಕೇಂದ್ರ ನಿಲ್ದಾಣಕ್ಕೆ ಬರುವ ತಾಪತ್ರೆಯ ತಪ್ಪುತ್ತದೆ ಎಂದು ಮನವಿ ಪತ್ರ ಸಲ್ಲಿಸಿದರು.