ಮಿಷನ್ ಇಂದ್ರಧನುಷ ಅಭಿಯಾನಕ್ಕೆ ಚಾಲನೆ

bkt-7-1
Published on

ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳು, 50 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ ಹಮ್ಮಿಕೊಂಡ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಗುವಿಗೆ ಲಸಿಕೆ ಹಾಕುವ ಮೂಲಕ ಸೋಮವಾರ ಚಾಲನೆ ನೀಡಿದರು.

ನಗರದ 50 ಹಾಸಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜನಿಸಿದ ಮಕ್ಕಳಿಗೆ ಎಲ್ಲ ಲಸಿಕೆಗಳನ್ನು ಹಾಕಿಸುವುದು ಸಮಾಜದ ಹಾಗೂ ಸರ್ಕಾರದ ಜವಬ್ದಾರಿಯಾಗಿರುತ್ತದೆ, ಯಾವು ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಸಾರ್ವಜನಿಕರಿಗೆ ಅರಿವು ಮುಡಿಸುವುದು ಅತ್ಯ ಅವಶ್ಯಕವಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಮಾತನಾಡಿ ಮನೆಮನೆಗೆ ತೆರಳಿ ಲಸಿಕೆಗೆ ಅರ್ಹರಿರುವ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿ ನಿಗದಿತ ಗುರಿಯನ್ನು ಸಾಧಿಸಲು ತಿಳಿಸಿದ ಅವರು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂತರ ಇಲಾಖೆಯ ಸಮನ್ವಯತೆಯಿಂದ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಯಶ್ರೀ ಎಮ್ಮಿ ಪ್ರಾಸ್ತವಿಕ ಮಾತನಾಡಿ ಲಸಿಕಾ ವಂಚಿಕೆ ಮಕ್ಕಳ ಹಾಗೂ ಗರ್ಭಿಣಿಯರಿಗೆ ನೀಡುವ ಮಿಷನ್ ಇಂದ್ರ ದನುಷ್ 5.0 ಕಾರ್ಯಕ್ರಮದ ಉದ್ದೇಶಗಳನ್ನು ವಿವರಿಸಿದರು. ದಡಾರ ರುಬೆಲ್ಲಾ ನಿರ್ಮೂಲನೆಯತ್ತ ದೊಡ್ಡ ಹೆಜ್ಜೆ, ಮಗುವಿಗೆ ಲಸಿಕೆಯನ್ನು ಪೂರ್ಣಗೊಳಿಸಿ ರೋಗಗಳಿಂದ ದೂರವಿಡಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಕಲಾ ಸಿನ್ನೂರು ಸೇರಿದಂತೆ ವೈಧ್ಯಾಧಿಕಾರಿಗಳು, ಸಿಬ್ಬಂದಿವರ್ಗ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿರಿದ್ದರು. ಕಾರ್ಯಕ್ರಮವನ್ನು ಎ.ಜಿ.ನೀಲವಾಣಿ ನಿರೂಪಿಸಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net