ಮೀಡಿಯಾ ಫೆಸ್ಟ್ ಫೆ.17, 28ರಂದು

jadiyappa
Published on

ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಮೊದಲ ಬಾರಿಗೆ ಫೆ.೧೭, ೧೮ರಂದು ಎರಡು ದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮೀಡಿಯಾ ಫೆಸ್ಟ್ -೨೦೨೫ ಆಯೋಜಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶರಣಬಸವ ವಿಶ್ವವಿದ್ಯಾಲಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಾಗಾರ, ಗೋಷ್ಠಿ, ಸ್ಪರ್ಧೆ ನಡೆಯಲಿವೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಪದವಿ, ಸ್ನಾತಕ ಪದವಿಯ ಪತ್ರಿಕೋದ್ಯಮದ ಸುಮಾರು ೨೦೦ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹಿಸಲು ವೈಯಕ್ತಿಕ, ಗುಂಪು ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ವೈಯಕ್ತಿಕ ಸ್ಪರ್ಧೆಗಳಲ್ಲಿ ನೇರ ಪತ್ರಿಕಾಗೋಷ್ಠಿ ವರದಿ ಮಾಡುವಿಕೆ, ಪಿಟಿಸಿ ಮತ್ತು ಟಿವಿ ವರದಿ ಮಾಡುವಿಕೆ, ಸ್ಪಾಟ್ ಛಾಯಾಗ್ರಹಣ, ರೇಡಿಯೋ ಜಾಕಿ, ನುಡಿಚಿತ್ರ, ಜಾಹೀರಾತು ಬರವಣಿಗೆ, ಸಾಮಾಜಿಕ ಮಾಧ್ಯಮದ ವರದಿ ಮಾಡುವಿಕೆ ಮತ್ತು ಮುಖ್ಯಾಂಶ ಬರೆಯುವ ಕಲೆ ಇವೆ. ಗುಂಪು ಸ್ಪರ್ಧೆಗಳಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ರಸಪ್ರಶ್ನೆ, ನಮ್ಮೂರ ಭಾಷೆವರವಾ? ಶಾಪವಾ? ವಿಷಯ ಕುರಿತ ಸ್ಪರ್ಧೆ ಇರಲಿದೆ ಎಂದರು.

ಫೆ.೧೭ರAದು ಬೆಳಗ್ಗೆ ೧೦ಕ್ಕೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಮೀಡಿಯಾ ಫೆಸ್ಟ್ ಉದ್ಘಾಟಿಸಲಿz್ದÁರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ, ಶ್ರೀ ಚಿ.ದೊಡ್ಡಪ್ಪ ಅಪ್ಪ ಸಾನ್ನಿಧ್ಯ ವಹಿಸಲಿದ್ದಾರೆ. ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್, ಕೊಪ್ಪಳ ವಿವಿ ಕುಲಪತಿ ಡಾ.ಬಿ.ಕೆ.ರವಿ, ಶರಣಬಸವ ವಿವಿ ಕುಲಪತಿ ಡಾ.ಅನಿಲ್‌ಕುಮಾರ ಬಿಡವೆ, ಗುವಿವಿ ಕುಲಪತಿ ಡಾ.ಶ್ರೀರಾಮುಲು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯP್ಷÀ ಭವಾನಿ ಸಿಂಗ್, ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಸೇರಿ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಫೆ.೧೮ರAದು ವೈದ್ಯಕೀಯ ಶಿP್ಷÀಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದು, ಶಾಸಕರಾದ ಖನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ್ ಇತರರು ಭಾಗವಹಿಸಲಿದ್ದಾರೆ. ಕೂಡಾ ಅಧ್ಯಕ್ಷ ಮಜರ್ ಆಲಂಖಾನ್ ಬಹುಮಾನ ವಿತರಿಸಲಿದ್ದಾರೆ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯP್ಷÀ ಭವಾನಿ ಸಿಂಗ್, ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಇದ್ದರು.

ಎರಡು ವಿಶೇಷ ಕಾರ್ಯಾಗಾರ: ಹಿರಿಯ ಪತ್ರಕರ್ತ, ಆಲ್ಮಾ ಮೀಡಿಯಾ ಸಂಸ್ಥಾಪಕ ಗೌರೀಶ್ ಅಕ್ಕಿ ಅವರಿಂದ ಮಾಧ್ಯಮದ ಸ್ಪರ್ಧಾತ್ಮಕ ಜಗತ್ತನ್ನು ಪ್ರವೇಶಿಸುವ ಹಾಗೂ ಸವಾಲು, ಪ್ರವೇಶಕ್ಕೆ ಸಿದ್ಧತೆ ಕುರಿತು ಕಾರ್ಯಾಗಾರ ನಡೆಯಲಿದೆ. ಎರಡನೇ ಕಾರ್ಯಾಗಾರದಲ್ಲಿ ನಕಲಿ ಸುದ್ದಿ ಗುರುತಿಸುವ ಕುರಿತು ಮಣಿಪಾಲ ಉನ್ನತ ಶಿP್ಷÀಣ ಅಕಾಡೆಮಿ ಹಿರಿಯ ಪತ್ರಕರ್ತೆ ಹಾಗೂ ಪ್ರಾಧ್ಯಾಪಕಿ ಪ್ರೊ.ಕಾಂಚನಾ ಕೌರ್ ಮಾತನಾಡಲಿz್ದÁರೆ. ಸ್ಥಳೀಯ ಪತ್ರಕರ್ತರಿಗೂ ಭಾಗವಹಿಸಲು ಅವಕಾಶವಿದೆ ಎಂದು ಟಿ.ಶಿವಾನಂದನ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net