

ಬಳ್ಳಾರಿ : ಮೀನುಗಾರರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಮೀನುಗಾರಿಕೆ ಇಲಾಖೆಯಿಂದ ಸಿಗಬಹುದಾದ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.
ನಗರದ ತಾಪಂ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಪಂ ಕಾರ್ಯಕ್ರಮದಡಿ ನಿರ್ಮಾಣ ಮಾಡಲಾದ ಅಮೃತ ಸರೋವರ ಕೊಳಗಳಲ್ಲಿ ಮೀನು ಮರಿಗಳನ್ನು ದಾಸ್ತಾನು ಮಾಡಿ ಮೀನು ಉತ್ಪಾದನೆಯನ್ನು ಹೆಚ್ಚಿಸುವಂತೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿ, ಮೀನು ಕೃಷಿಕರು ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಕೋರಿದರು.