ಮುಂಗಾರು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ

Lack of moisture for crops
Published on

ಕಲಬುರಗಿ: ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ಸರ್ಕಾರದ ಆದೇಶದ ಪ್ರಕಾರ ಈ ಬಾರಿಯ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ತಮ್ಮ ಮೊಬೈಲ್‌ನೊಂದಿಗೆ ಜಮೀನಿನಲ್ಲಿ ಬೆಳೆದ ಬೆಳೆಯ ವಿವರ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಕಲಬುರಗಿ ಮತ್ತು ಕಮಲಾಪುರ ತಾಲೂಕಿನ ರೈತರು ತಮ್ಮ ಜಮೀನಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಲು ರೈತರ ಬೆಳೆ ಸಮೀಕ್ಷೆ ಆ್ಯಪ್-೨೦೨೪ ಎಂಬ ಹೆಸರಿನ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿ, ಆಧಾರ್ ಕಾರ್ಡ್ ಅನ್ನು ಮೊಬೈಲ್ ಆ್ಯಪ್‌ನಲ್ಲಿ ಸ್ಕಾÈನ್ ಮಾಡಿಕೊಳ್ಳಬೇಕು. ತಮ್ಮ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ನಮೂದಿಸಿ ಸಕ್ರಿಯಗೊಳಸಿಕೊಂಡು ನಿಗದಿತ ಅವಧಿಯೊಳಗೆ ಬೆಳೆ ವಿವರ ದಾಖಲಿಸಬೇಕು. ಈ ಬೆಳೆ ಸಮೀಕ್ಷೆಯ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಉಪಯೋಗಿಸಲಾಗುತ್ತಿದ್ದು, ಅದರಲ್ಲಿ ಮುಖ್ಯವಾಗಿ ಬೆಳೆ ಹಾನಿ, ಪರಿಹಾರ, ಬೆಳೆ ವಿಮೆ, ಪಹಣಿಯಲ್ಲಿ ಬೆಳೆ ನಮೂದಿಸಲು, ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿಯ ಸಮಯ ಸೇರಿ ಇನ್ನಿತರ ಸೌಕರ್ಯ ಸಿಗಲಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net