ಮುಂಗಾರು ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

Published on


ಧಾರವಾಡ: ತಾಲೂಕಿನ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯಿಂದ 2022- 23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆ ಸ್ಪರ್ಧೆ ಏರ್ಪಡಿಸಲಾಗಿದೆ.
ರಾಜ್ಯ ಮಟ್ಟದ ಸ್ಪರ್ಧೆಗೆ ಭತ್ತ (ನೀರಾವರಿ ಮತ್ತು ಮಳೆಯಾಶ್ರಿತ), ರಾಗಿ, ಶೇಂಗಾ, ತೊಗರಿ, ಸೋಯಾಅವರೆ, ಗೋವಿನಜೋಳ, ನವಣೆ, ಸಜ್ಜೆ (ಮಳೆಯಾಶ್ರಿತ) ಹಾಗೂ ಜಿಲ್ಲಾ ಮಟ್ಟಕ್ಕೆ ಮುಂಗಾರು ಹಂಗಾಮಿಗೆ ಸೋಯಾಅವರೆ(ಮಳೆಯಾಶ್ರಿತ), ತಾಲೂಕು ಮಟ್ಟಕ್ಕೆ ಸೋಯಾಅವರೆ (ಮಳೆಯಾಶ್ರಿತ) ಬೆಳೆ ನಿಗದಿಪಡಿಸಲಾಗಿದೆ. ಆಸಕ್ತ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಆ. 31ರೊಳಗೆ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ, ವರ್ಗದ ರೈತರಿಗೆ 25 ರೂ. ಮತ್ತು ಸಾಮಾನ್ಯ ರೈತರಿಗೆ 100 ರೂ. ಅರ್ಜಿ ಶುಲ್ಕ ಇದೆ. ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬೇಕು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net