ಮುಂಡಗೋಡ ಪ.ಪಂ. ರೇಣುಕಾ ಅಧ್ಯಕ್ಷೆ, ಮಂಜುನಾಥ ಉಪಾಧ್ಯಕ್ಷ

3mnd1
Published on

ಮುಂಡಗೋಡ:ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ಜರುಗಿದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ರೇಣುಕಾ ಹಾವೇರಿ ಅಧ್ಯಕ್ಷೆಯಾಗಿ ಮತ್ತು ಮಂಜುನಾಥ ಹರಮಲಕರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗದ ಮೀಸಲಾತಿ ಇತ್ತು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ರೇಣುಕಾ ರವಿ ಹಾವೇರಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಮಂಜುನಾಥ ಹರಮಲಕರ ಮತ್ತು ಕಾಂಗ್ರೆಸ್​ನಿಂದ ಬೀಬಿಜಾನ ಮುಲ್ಲಾನವರ ನಾಮಪತ್ರ ಸಲ್ಲಿಸಿದ್ದರು. ಕೊನೆಗೆ ಬೀಬಿಜಾನ ಮುಲ್ಲಾನವರ ನಾಮಪತ್ರ ಹಿಂಪಡೆದ ಕಾರಣ ಮಂಜುನಾಥ ಹರಮಲಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಸೀಲ್ದಾರ್ ಶ್ರೀಧರ ಮುಂದಲಮನಿ ಘೊಷಿಸಿದರು.

ಪ.ಪಂ.ನ ಒಟ್ಟು 19 ಸ್ಥಾನಗಳಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್​ನ 9 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕಾಂಗ್ರೆಸ್​ನ 4 ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗಿದ್ದರಿಂದ ಬಿಜೆಪಿ ಬೆಂಬಲಿತ ಸದಸ್ಯರ ಸಂಖ್ಯೆ 14ಕ್ಕೇರಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಮತ್ತು ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ, ವಿವೇಕ ಹೆಬ್ಬಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net