ಮುಂದಿನ ಪೀಳಿಗೆಗೆ ಭ್ರಷ್ಟ ಸಮಾಜ ಕೊಡುತ್ತೀರಾ? ಉಪಲೋಕಾಯುಕ್ತರು ಅಧಿಕಾರಿಗಳಿಗೆ ಚಾಟಿ

mysore
Published on

ಮೈಸೂರು: ಮುಂದಿನ ಪೀಳಿಗೆಗೆ ಭ್ರಷ್ಟ ಸಮಾಜವನ್ನು ಕೊಟ್ಟು ಹೋಗಬೇಕೇ? ತಕ್ಷಣ ಎಚ್ಚೆತ್ತುಕೊಂಡು ಪ್ರಾಮಾಣಿಕವಾಗಿ, ಕಾನೂನಿನ ಚೌಕಟ್ಟಿನಲ್ಲಿ ತ್ವರಿತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅಧಿಕಾರಿಗಳಿಗೆ ಚಾಟಿ ಬೀಸಿದರು.

ಜಿಪಂ ಸಭಾಂಗಣದಲ್ಲಿ  ಹಮ್ಮಿಕೊಂಡಿದ್ದ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಂದರ್ಭದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರಮುಕ್ತ ಸಮಾಜ ನಿರ್ಮಾಣ ಅಧಿಕಾರಿಗಳಿಂದ ಮಾತ್ರ ಆಗಲ್ಲ.

ಅದಕ್ಕೆ ಸಾರ್ವಜನಿಕರು ಸಹ ಕೈಜೋಡಿಸಬೇಕು. ಸರ್ಕಾರಿ ಅಧಿಕಾರಿಗಳು ಲಂಚ ತೆಗೆದುಕೊಳ್ಳಬಾರದು, ಜನರು ಸಹ ಕೊಡಬಾರದು. ಅಧಿಕಾರಿಗಳು ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗಬಾರದು.

ಮಾಡುವ ಕೆಲಸವನ್ನು ಮಾಡದೇ ಇರುವುದು ಸಹ ಕಾನೂನು ಉಲ್ಲಂಘನೆ. ನಿಧಾನಗತಿ ಕೆಲಸವೂ ಕರ್ತವ್ಯ ಲೋಪವೇ. ಆಗಲೇ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಆದ್ದರಿಂದ ಎಚ್ಚರಿಕೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಲೋಕಾಯುಕ್ತ ಜಂಟಿ ನಿಬಂಧಕಿ (ವಿಚಾರಣೆ) ವಿ.ಎನ್.ವಿಮಲಾ, ಲೋಕಾಯುಕ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಮರ್‌ನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಯುಕೇಸ್‌ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net