ಮುಂದಿನ ವರ್ಷದಿಂದ 12 ಪಪೂ ಕಾಲೇಜು ಪ್ರಾರಂಭ

29 HANUR 3
Published on

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ 12 ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಲಿವೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಜಿ.ವಿ. ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಹನೂರು ಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದು, ಪದವಿ ಪೂರ್ವ ಶಿಕ್ಷಣಕ್ಕಾಗಿ ಕೊಳ್ಳೇಗಾಲಕ್ಕೆ ತೆರಳುವಂತಾಗಿದೆ. ಇದನ್ನು ಮನಗಂಡು ಕಳೆದ ಬಾರಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕ್ಷೇತ್ರಕ್ಕೆ 15 ಪದವಿ ಪೂರ್ವ ಕಾಲೇಜು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಸಂಬಂಧ 12 ಕಾಲೇಜುಗಳು ಮಂಜೂರಾಗಿದ್ದವು. ಆದರೆ ಅನುದಾನದ ಕೊರತೆಯಿಂದ ಕಾಲೇಜು ಪ್ರಾರಂಭಿಸಲು ಸಾಧ್ಯವಾಗಿರಲಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಮಂಜೂರಾಗಿರುವ ಕಾಲೇಜುಗಳು ಪ್ರಾರಂಭವಾಗಲಿವೆ ಎಂದು ತಿಳಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜೇತವನದ ಮನೋರಖ್ಖಿತ ಬಂತೇಜಿ, ಪಪಂ ಸದಸ್ಯ ಮಹೇಶ್, ಪ್ರಾಂಶುಪಾಲ ಶೈಲೇಶ್‌ಕುಮಾರ್, ಉಪನ್ಯಾಸಕರಾದ ರವಿಶಂಕರ್, ಶಾಂತರಾಜು, ವಾಣಿ, ಕೃಪಾ, ಮನೋಜ್‌ಕುಮಾರ್, ಗ್ರಂಥಾಲಯದ ಮುಖ್ಯಸ್ಥ ಸುರೇಂದ್ರ, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net