ಮುಂದುವರಿದ ಅಹೋರಾತ್ರಿ ಧರಣಿ

22SARAG1
ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಅವರಿಗೆ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.
Published on

ಸರಗೂರು: ನೆರೆ ಸಂತ್ರಸ್ತರ ಆಯ್ಕೆಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ತಾಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಮುಂದುವರಿದಿದ್ದು, ಶನಿವಾರ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಜತೆ ಮಾತುಕತೆ ನಡೆಸಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿ ಗಮನಕ್ಕೂ ತಂದು ಮಳೆಯಿಂದಾಗಿ ಮನೆಗಳು ಹಾನಿಗೊಂಡಿರುವ ಅರ್ಜಿಗಳನ್ನು ಮರುಪರಿಶೀಲನೆ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಕೋಟೆ ಎಂ.ಶಿವಣ್ಣ ಭರವಸೆ ನೀಡಿದರು.

ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿರ್ವಾಳ್ ಬಸವರಾಜು, ಸರಗೂರು ಅಭಿವೃದ್ಧಿ ಹೋರಾಟಗಾರ ಸರಗೂರು ಕೃಷ್ಣ, ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ಮಾಜಿ ಅಧ್ಯಕ್ಷ ಮುದ್ದು ಮಲ್ಲಯ್ಯ, ಮಲಾರ ಮಹದೇವ, ಬೆಟ್ಟಸ್ವಾಮಿ, ಮಲ್ಲೇಶ್, ಎಪಿಪಿ ತಾಲೂಕು ಅಧ್ಯಕ್ಷ ಗ್ರಾಮೀಣ ಮಹೇಶ್, ಗ್ರಾಪಂ ಅಧ್ಯಕ್ಷ ಗೋವಿಂದಾಚಾರ್, ದಸಂಸ ಸಂಚಾಲಕ ಲಂಕೆ ಲಕ್ಷ್ಮಣ್, ಗ್ರಾಪಂ ಸದಸ್ಯರಾದ ನಾಗರಾಜು, ಶಿವರಾಜು, ಕರ್ನಾಟಕ ಭಿಮಾ ಸೇನೆ ತಾಲೂಕು ಅಧ್ಯಕ್ಷ ಮಹೇಂದ್ರ ಬಸವಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net