ಮುಂದುವರಿದ ಡಾ.ರವಿ ಪಾಟೀಲ ಮತಬೇಟೆ

0102
Published on

ಬೆಳಗಾವಿ: ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಅವರು ಶನಿವಾರ ಕ್ಷೇತ್ರದಲ್ಲಿ ಸಂಚರಿಸಿ ಮತಯಾಚನೆ ಮಾಡಿದರು. ಮಾಲಿನಿ ನಗರ, ಕಣಬರ್ಗಿ ರಸ್ತೆ, ರೆವೆನ್ಯೂ ಕಾಲನಿ, ರೇಣುಕಾ ನಗರದಲ್ಲಿ ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಬಳಿಕ ಅಶೋಕ ನಗರದಲ್ಲಿ ಮನೆ, ಮನೆಗೆ ತೆರಳಿ ಮತದಾನ ಮಾಡುವಂತೆ ಕೋರಿದರು. ಹೋದ ಕಡೆಗಳಲ್ಲಿ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ರಾಮನಗರದಲ್ಲಿ ಭರ್ಜರಿ ಪ್ರಚಾರ ಕೈಗೊಂಡು ಸ್ಥಳೀಯ ನಾಗರಿಕರನ್ನು ಭೇಟಿ ಮಾಡಿ ಕುಂದು-ಕೊರತೆ ಆಲಿಸಿದರು. ಡಾ. ರವಿ ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮಹಾತ್ವಾಕಾಂಕ್ಷಿ ಯೋಜನೆ ಜಾರಿಗೆ ತಂದಿದ್ದು, ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ಮತದಾರರ ಈ ಬಾರಿಯೂ ಬಿಜೆಪಿಗೆ ಮತ ನೀಡಿ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕು ಎಂದು ಕೋರಿದರು. ಸ್ಥಳೀಯರು ಕೂಡ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದರು.

ಪತಿ ಪರ ಸುನೀತಾ ಪಾಟೀಲ ಮತಯಾಚನೆ: ಡಾ.ರವಿ ಪಾಟೀಲ ಪತ್ನಿ ಸುನೀತಾ ಪಾಟೀಲ ಅವರು ಪ್ರಚಾರ ಕಾರ್ಯಕ್ಕೆ ಸಾಥ್ ನೀಡಿದ್ದು, ಶನಿವಾರ ಅಬ್ಬರದ ಪ್ರಚಾರ ನಡೆಸಿದರು. ಬೆಳಗ್ಗೆ 8 ಗಂಟೆಯಿಂದಲೇ ಪ್ರಚಾರ ಆರಂಭಿಸಿದ್ದರು. ಮನೆ, ಮನೆಗೆ ತೆರಳಿ ಮತದಾನ ಮಾಡುವಂತೆ ಕೋರಿದರು.

ಪ್ರತಿ ಮನೆಯವರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬೆಂಬಲ ಸೂಚಿಸಿದ್ದು ಕಂಡುಬಂತು. ಅವರೊಟ್ಟಿಗೆ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಕಾರ್ಯಕರ್ತರ ತಂಡಕ್ಕೆ ಉಪಚಾರ ಮಾಡಿದ್ದು ವಿಶೇಷವಾಗಿತ್ತು. ಬಿಜೆಪಿ ಮುಖಂಡರು, ಕಾರ್ಯಕರ್ತರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಕ್ಷೇತ್ರದಲ್ಲಿ ಸಂಚರಿಸಿ ಪ್ರಚಾರ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net