ಮುಂದುವರಿದ ಪ್ರತಿಭಟನೆ

Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ನವನಗರದಲ್ಲಿ ಮದ್ಯದಂಗಡಿ ಆರಂಭಿಸಿರುವುದನ್ನು ಖಂಡಿಸಿ ಪ್ರತಿಭಟನೆ ಸೋಮವಾರವೂ ಮುಂದುವರಿಯಿತು.

ಮದ್ಯದಂಗಡಿ ವಿರೋಧಿಸಿ ಸ್ಥಳೀಯ ಮಹಿಳೆಯರು ಹಾಗೂ ಸಾರ್ವಜನಿಕರು ಕಳೆದ 8 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ದೇವಸ್ಥಾನ, ಶಾಲೆ ಹಾಗೂ ಜನ ವಸತಿ ಪ್ರದೇಶಗಳಲ್ಲಿ ಮದ್ಯದಂಗಡಿ ಆರಂಭಿಸಿರುವುದನ್ನು ವಿರೋಧಿಸಿ ಸಾರ್ವಜನಿಕರು ಪ್ರತಿಭಟನೆ ಆರಂಭಿಸಿದ್ದಾರೆ. ಮದ್ಯದಂಗಡಿ ಬಂದ್ ಮಾಡಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net