ಮುಂದುವರಿದ ಮಳೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

IMG-20210714-WA0011
Published on

ಮಂಗಳೂರು: ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ.

ಕಳೆದ ನಾಲ್ಕು ದಿನಗಳಿಂದ ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ಕುಮಾರಧಾರ, ನೇತ್ರಾವತಿ, ಫಲ್ಗುಣಿ ಮೊದಲಾದ ನದಿಗಳು ತುಂಬಿ ಹರಿಯುತ್ತಿವೆ.ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳು ಕುಮಾರಧಾರ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ.

ಸ್ನಾನಘಟ್ಟ ಬಳಿ ಕಿಂಡಿ ಅಣೆಕಟ್ಟು ಕೂಡ ಸಂಪೂರ್ಣ ಮುಳುಗಡೆಯಾಗಿದೆ. ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಅಪಾಯಕಾರಿ ಸ್ಥಿತಿ ಎದುರಿಸಲು ಗೃಹರಕ್ಷಕ ದಳ,ಅಗ್ನಿಶಾಮಕ ದಳ ಸಜ್ಜಾಗಿವೆ.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net