

ಚಾಮರಾಜನಗರ: ತಾಲೂಕಿನ ಮಕ್ಕಡಹಳ್ಳಿ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಚಾಮರಾಜನಗರ ಕೃಷಿ ಮಹಾವಿದ್ಯಾಲಯ ಸಹಯೋಗದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಗೆ ಬುಧವಾರ ಗ್ರಾಮಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 100 ರಿಂದ 150 ರೈತರು ಪಾಲ್ಗೊಂಡಿದ್ದರು. ಇದರ ಮುಖ್ಯ ಉದ್ದೇಶವು ರೈತರಿಗೆ ಗ್ರಾಮೀಣ ಕೃಷಿ ಕಾರ್ಯಾನುಭವದ ಉದ್ದೇಶವನ್ನು ತಿಳಿಸುವುದಾಗಿತ್ತು.
ಕಾರ್ಯಕ್ರಮದಲ್ಲಿ ಶಿಬಿರದ ಸಂಯೋಜಕ ಡಾ.ಜಿ.ನಾಗೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ ವಿದ್ಯಾರ್ಥಿಗಳು ಗ್ರಾಮದಲ್ಲಿ 90 ದಿನಗಳ ಕಾಲ ನೆಲೆಸಿರುವ ಉದ್ದೇಶವನ್ನು ತಿಳಿಸಿದರು. ಪ್ರಭಾರ ವಿಶೇಷಾಧಿಕಾರಿ ಡಾ.ಪಿ.ಪ್ರಕಾಶ್, ತೋಟಗಾರಿಕೆ ವಿಭಾಗದ ಡಾ.ದೇವರಾಜ್ ಮಾತನಾಡಿದರು. ಬಳಿಕ ಕೆಲವು ರೈತ ಮುಖಂಡರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.