ಮುತ್ತತ್ತಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

22tnpnewsfile01 (2)
ತಿ.ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು.
Published on

ತಿ.ನರಸೀಪುರ; ತಾಲೂಕಿನ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬುಧವಾರ ರಾತ್ರಿ ಚಿರತೆ ಸೆರೆಯಾಗಿದೆ.

ಗ್ರಾಮದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನು ಇಟ್ಟಿತ್ತು. ಬೋನಿನಲ್ಲಿ ಕೋಳಿಯನ್ನು ಕಟ್ಟಲಾಗಿತ್ತು. ರಾತ್ರಿ ಕೋಳಿ ತಿನ್ನಲು ಬಂದ ಎರಡೂವರೆ ವರ್ಷದ ಚಿರತೆ ಬೋನಿನಲ್ಲಿ ಬಂಧಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮಾತನಾಡಿ, ಕೆಲ ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಹಾಗಾಗಿ ಬೋನು ಇಡಲಾಗಿತ್ತು. ಎರಡು ತಿಂಗಳಿಂದಲೂ ಬೋನುಗಳನ್ನು ಅಳವಡಿಸಿ ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಚಿರತೆ ಸೆರೆಗೆ ಕಾರ್ಯಾಚರಣೆ ರೂಪಿಸಲಾಗಿತ್ತು. ಇದೀಗ ಒಂದು ಚಿರತೆ ಬೋನಿಗೆ ಬಿದ್ದಿದೆ ಎಂದರು.

ಸೆರೆ ಸಿಕ್ಕ ಚಿರತೆಗೆ ಕಾಲರ್ ಐಡಿ ಅಳವಡಿಸಿ ಮತ್ತೆ ಅರಣ್ಯಕ್ಕೆ ಬಿಡುವ ಸಾಧ್ಯತೆ ಇದೆ. ಚಿರತೆ ಚಲನವಲನಗಳ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲು ಸಾಭ್ಯವಾಗಲಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net