ಮುದುಡಿ ಗ್ರಾಪಂ ಅಧ್ಯಕ್ಷ ಚೀರನಹಳ್ಳಿ ರಂಗಸ್ವಾಮಿ

IMG_20250607_143437
Published on

ಗಂಡಸಿ: ಹೋಬಳಿಯ ಮುದುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಚೀರನಹಳ್ಳಿ ರಂಗಸ್ವಾಮಿ, ಉಪಾಧ್ಯಕ್ಷರಾಗಿ ಬಿಸಲೇಹಳ್ಳಿ ಭಾರತಿ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷರಾಗಿದ್ದ ಮೋಕ್ಷಾ, ಉಪಾಧ್ಯಕ್ಷರಾಗಿದ್ದ ಭವ್ಯಾ ಆಂತರಿಕ ಒಡಂಬಡಿಕೆಯಂತೆ ರಾಜೀನಾಮೆ ನೀಡಿದ್ದು, ತೆರವಾಗಿದ್ದ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಿತು.

12 ಸದಸ್ಯರ ಬಲದ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಂಗಸ್ವಾಮಿ, ಉಪಾಧ್ಯಕ್ಷ ಸ್ಥಾನಕ್ಕೆ ಭಾರತಿ ಮಾತ್ರ ನಾಮಪತ್ರ ಸಲ್ಲಿಸಿದರು. ಬೇರ‌್ಯಾರು ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರಾಗಿ ರಂಗಸ್ವಾಮಿ, ಉಪಾಧ್ಯಕ್ಷರಾಗಿ ಭಾರತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.

ಶಾಸಕ ಕೆ.ಎಂ.ಶಿವಲಿಂಗೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು, ಜಿಪಂ ಮಾಜಿ ಅಧ್ಯಕ್ಷ ಹುಚ್ಚೇಗೌಡ, ತಾಪಂ ಮಾಜಿ ಸದಸ್ಯ ಈಶ್ವರಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಯರಗನಾಳು ಮಲ್ಲೇಶ್, ಗಂಡಸಿ ಕುಮಾರ್ ಮತ್ತಿತರ ಮುಖಂಡರು ಹಾಜರಿದ್ದರು.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಶಾಸಕ ಕೆ.ಎಂ. ಶಿವಲಿಂಗೇಗೌಡ, ಜಿಪಂ ಮಾಜಿ ಅಧ್ಯಕ್ಷ ಹುಚ್ಚೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು, ತಾಪಂ ಮಾಜಿ ಸದಸ್ಯ ಈಶ್ವರಪ್ಪ ಇತರರು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net