

ಚಿಕ್ಕಬಳ್ಳಾಪುರ : ಸತತ ಎರಡು ವರ್ಷಗಳಿಂದ ಖಾಲಿಯಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಂ.ಮುನೇಗೌಡರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮುನೇಗೌಡರರ ನೇಮಕಕ್ಕೆ ಅಸ್ತು ಎನ್ನಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಕಳೆದ ವಿಧಾನಸಭೆ ಚುನಾವಣೆಯ ಶಿಡ್ಲಘಟ್ಟ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಮೇಲೂರು ರವಿಕುಮಾರ್ ಸಹ ಆಕಾಂಕ್ಷಿಯಾಗಿದ್ದರು. ಹಿಂದೆ ಜಿಲ್ಲಾಧ್ಯಕ್ಷರಾಗಿದ್ದ ಕೆ.ವಿ.ನಾಗರಾಜ್ ಪಕ್ಷಕ್ಕೆ ಗುಡ್ ಬೈ ಹೇಳಿ, ಕಾಂಗ್ರೆಸ್ ಸೇರಿದ್ದರಿಂದ (ಪ್ರಸ್ತುತ ಬಿಜೆಪಿ) ಕೆ.ಟಿ.ನಾರಾಯಣಸ್ವಾಮಿ ಹಂಗಾಮಿ ಅಧ್ಯಕ್ಷರಾಗಿದ್ದರು.ಸಭೆಯಲ್ಲಿ ಚಿಂತಾಮಣಿ ಶಾಸಕ ಎಂ.ಕೃಷ್ಣಾರೆಡ್ಡಿ, ಜಿಪಂ ಸದಸ್ಯ ಕೆ.ಸಿ.ರಾಜಾಕಾಂತ್, ಮುಖಂಡ ಮೇಲೂರು ರವಿಕುಮಾರ್ ಇದ್ದರು.