ಮುಮ್ಮಿಗಟ್ಟಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ 29ಕ್ಕೆ

25 Dwd 3 Leela Kalakoti
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ. 29ರಂದು ಗ್ರಾಮದ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ನಗರದ ಹಿರಿಯ ಸಾಹಿತಿ ಲೀಲಾ ಕಲಕೋಟಿ ಅವರನ್ನು ಆಯ್ಕೆ ಮಾಡಲಾಗಿದೆ. 29ರಂದು ಬೆಳಗ್ಗೆ 8.30ಕ್ಕೆ ಮುಮ್ಮಿಗಟ್ಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರ, ನಾಡ ಹಾಗೂ ಪರಿಷತ್ ಧ್ವಜಾರೋಹಣ ನೆರವೇರಿಸಲಾಗುವುದು. 9 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ತಹಸೀಲ್ದಾರ್ ಸಂತೋಷ ಹಿರೇಮಠ ಉದ್ಘಾಟಿಸುವರು. ಮೆರವಣಿಗೆಯಲ್ಲಿ ಪೂರ್ಣಕುಂಭ ಹೊತ್ತು ಮಹಿಳೆಯರು, ಕರಡಿ ಮಜಲು, ಡೊಳ್ಳು, ಸಂತರ ದಿಂಡಿ, ಎತ್ತಿನ ಬಂಡಿಗಳು, ಹೆಜ್ಜೆ ಮೇಳ, ಭಜನಾ ತಂಡಗಳು ಹಾಗೂ ಶಾಲಾ ಮಕ್ಕಳು ಪಾಲ್ಗೊಳ್ಳುವರು.
ಬೆಳಗ್ಗೆ 10.30ಕ್ಕೆ ಹಿರಿಯ ಸಾಹಿತಿ ಡಾ. ಶಾಂತಾ ಇಮ್ರಾಪೂರ ಸಮ್ಮೇಳನ ಉದ್ಘಾಟಿಸುವರು. ಕಸಾಪ ಜಿಲ್ಲಾ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಆಶಯ ನುಡಿಗಳನ್ನಾಡುವರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ನಿಂಗಣ್ಣ ಕುಂಟಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಗೌರವ ಉಪಸ್ಥಿತರಿರುವರು. ಮಧ್ಯಾಹ್ನ 12.30ರಿಂದ ವಿವಿಧ ಗೋಷ್ಠಿಗಳು ಜರುಗಲಿವೆ ಎಂದು ಕಸಾಪ ತಾಲೂಕು ಅಧ್ಯಕ್ಷೆ ಡಾ. ಶರಣಮ್ಮ ಗೊರೇಬಾಳ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net