ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ

Published on

ಗುಂಡ್ಲುಪೇಟೆ: ತಾಲೂಕಿನ ಮೇಲುಕಾಮನಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡಿ ಗ್ರೂಪ್ ನೌಕರನ ಅನುಚಿತ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿನಿಯರು ಗುರುವಾರ ಶಾಲೆಯಲ್ಲಿ ಪ್ರತಿಭಟನೆ ನಡೆಸಿದರು.

ನೌಕರ ನಾಗರಾಜು ಎಂಬಾತ ಹುಡುಗಿಯರ ಜತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾನೆ. ಹೆಣ್ಣು ಮಕ್ಕಳ ಮೈಮೇಲೆ ಕೈ ಹಾಕುವುದು ಸೇರಿದಂತೆ ಕಿರುಕುಳ ನೀಡುತ್ತಿದ್ದಾನೆ. ಈ ಬಗ್ಗೆ ದೂರು ನೀಡಿದರೂ ಯಾವುದೇ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ವಿಷಯ ತಿಳಿದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್.ಬಿಂದ್ಯಾ, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಬಳಿ ಮಾಹಿತಿ ಪಡೆದುಕೊಂಡರು. ನಾಗರಾಜು ವಿರುದ್ಧ ವಿದ್ಯಾರ್ಥಿನಿಯರು ನೀಡಿರುವ ದೂರು ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ಶಿಕ್ಷಕರ ಸಮನ್ವಯ ಕೊರತೆಯಿಂದ ಪದೇ ಪದೆ ಸಮಸ್ಯೆಗಳು ಕೇಳಿ ಬರುತ್ತಿವೆ. ಇದರಿಂದ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಲಿದೆ. ಆದ್ದರಿಂದ ಶಿಕ್ಷಕರು ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ಸಾಮೂಹಿಕವಾಗಿ ಬೇರೆಡೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು. ಸರ್ಕಲ್ ಇನ್‌ಸ್ಪೆಕ್ಟರ್ ಪರಶಿವಮೂರ್ತಿ, ಸಬ್ ಇನ್‌ಸ್ಪೆಕ್ಟರ್ ಸಾಹೇಬಗೌಡ, ವಿದ್ಯಾರ್ಥಿಗಳ ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net