ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಡಿಸಿ ಭೇಟಿ

DC visits Morarji Desai Residential School
DC visits Morarji Desai Residential School
Published on

ಲೋಕಾಪುರ: ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಭೇಟಿ ನೀಡಿ ಶಾಲಾ ಪ್ರಾರಂಭೋತ್ಸವ ಹಾಗೂ ಪ್ರಸಕ್ತ ವರ್ಷದ ವಿದ್ಯಾರ್ಥಿಗಳಿಗೆ ಬೇಕಾಗುವ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಹಾಸ್ಟೆಲ್‌ನಲ್ಲಿನ ಭೋಜನದ ಗುಣಮಟ್ಟ, ಆಹಾರ ಸಾಮಗ್ರಿ ಸಂಗ್ರಹಣೆ, ವಿದ್ಯಾರ್ಥಿಗಳಿಗೆ ಒದಗಿಸಿರುವ ಮೂಲಸೌಕರ್ಯ ಪರಿಶೀಲಿಸಿದರು.

ಶಾಲೆಯ ಕಲಿಕೆಯ ಗುಣಮಟ್ಟವನ್ನು ಸುಧಾರಿಸಲು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಗ್ರೇಡ್-2 ತಹಸೀಲ್ದಾರ್ ರಂಗನಗೌಡ ನಾಯ್ಕ, ಶಿರಸ್ತೇದಾರ ಮಹೇಶ ಪಾಂಡವ, ಕಂದಾಯ ನಿರೀಕ್ಷಕ ಸತೀಶ ಬೇವೂರ, ಬಿ.ಎಂ. ಬಸವಂತಪುರ, ವಾರ್ಡನ್ ಹುಚ್ಚಪ್ಪ ಸೊರಗಾಂವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net