ಮುರಾರ್ಜಿ ವಸತಿ ಶಾಲೆಗೆ ಜಾಫರ್ ದಿಢೀರ್ ಭೇಟಿ

Published on

ಮದ್ದೂರು: ತಾಲೂಕಿನ ಸೋಮನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ.ಪಿ.ಸಿ. ಜಾಫರ್ ಸೋಮವಾರ ಧಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದ ಅವರು, ನಿಲಯದಲ್ಲಿನ ಮೂಲ ಸೌಕರ್ಯ ಮತ್ತು ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ವಸತಿ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ಪೂರೈಕೆ ಮಾಡುವ ಬಗ್ಗೆ ಪಾಲಕರಿಗೆ ಭರವಸೆ ನೀಡಿದರು.

ವಿದ್ಯಾರ್ಥಿಗಳ ಜತೆ ಬೆರೆತು ಸೀಮೆಸುಣ್ಣ ಹಿಡಿದು ಸ್ವತಃ ಬೋರ್ಡ್ ಮೇಲೆ ಪ್ರಶ್ನೆಗಳನ್ನು ಬರೆದು ವಿದ್ಯಾರ್ಥಿಗಳಿಗೆ ಉತ್ತರಿಸಲು ತಿಳಿಸುವ ಮೂಲಕ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಅರಿತರು. ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯ ತರಗತಿಗಳನ್ನು ತೆಗೆದುಕೊಂಡು ಉತ್ತೇಜನವನ್ನು ನೀಡಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ತಹಸೀಲ್ದಾರ್ ನರಸಿಂಹಮೂರ್ತಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂದೀಪ್, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net