ಮುರಾರ್ಜಿ ವಸತಿ ಶಾಲೆಯ 31 ವಿದ್ಯಾರ್ಥಿಗಳಿಗೆ ಸೋಂಕು ದೃಢ

2
Published on

ಮರಳವಾಡಿ ಮುರಾರ್ಜಿ ವಸತಿ ಶಾಲೆಯ 31 ವಿದ್ಯಾರ್ಥಿಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರದ 7 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.

ಗಡಿ ಗ್ರಾಮವಾಗಿದ್ದು ಕಳೆದ ಎರಡು ದಿನಗಳ ಹಿಂದೆ ಒಬ್ಬ ವಿದ್ಯಾರ್ಥಿಗೆ ಸೋಂಕು ಕಾಣಿಸಿಕೊಂಡಿತ್ತು. ಅಧಿಕಾರಿಗಳು ಎಲ್ಲ ವಿದ್ಯಾರ್ಥಿಗಳ ಸ್ವಾೃಬ್ ಟೆಸ್ಟ್ ಮಾಡಿಸಿದಾಗ ಇತರ ವಿದ್ಯಾರ್ಥಿಗಳಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ವಾೃಬ್ ಟೆಸ್ಟ್ ವರದಿ ಬರುವ ಮುನ್ನವೇ ಶಾಲೆ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಮನೆಗೆ ಕಳಿಸಿದ್ದು, ಪಾಲಕರ ಆತಂಕಕ್ಕೂ ಕಾರಣವಾಗಿದೆ. ವಸತಿ ಶಾಲೆಯಲ್ಲಿದ್ದ ಮಕ್ಕಳು ಬೇರೆ ಗ್ರಾಮದವರಾಗಿದ್ದು, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಗುರುತಿಸಿ ಮನೆಯಲ್ಲೇ ಐಸೋಲೇಷನ್‌ಗೆ ಒಳಪಡಿಸಲಾಗುವುದು. ಆರೋಗ್ಯದಲ್ಲಿ ಏರುಪೇರಾದಲ್ಲಿ ಕರೊನಾ ಕೇಂದ್ರಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net