ಮುರಿದು ಬಿದ್ದ ವಿದ್ಯುತ್ ಕಂಬ

25ss1mane damage
ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲಂಬಿ ಗ್ರಾಮದಲ್ಲಿ ಮನೆಗಳು ನೆಲಕ್ಕುರುಳಿರುವುದು.
Published on

ಶನಿವಾರಸಂತೆ: ಗಾಳಿ ಸಹಿತ ಮಳೆ ಮುಂದುವರಿದಿದ್ದು, ಕೆಲವೆಡೆ ವಿದ್ಯುತ್ ಕಂಬ ಮುರಿದು ಬಿದ್ದು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

ಸೋಮವಾರ ರಾತ್ರಿ ಸುರಿದ ಮಳೆಗೆ ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲಂಬಿ ಗ್ರಾಮದ ಗಾಂಧಿ ಕಾಲನಿ ನಿವಾಸಿ ಅಯ್ಯಪ್ಪ ಮತ್ತು ವೇದಾವತಿ ಎಂಬುವರಿಗೆ ಸೇರಿದ ವಾಸದ ಮನೆಗಳು ನೆಲಕ್ಕುರುಳಿವೆ. ಈ ವೇಳೆ ಮನೆಯೊಳಗಿದ್ದವರು ತಕ್ಷಣ ಹೊರಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ. ನಂತರ ಪಕ್ಕದ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ.

ಆಲೂರು-ಸಿದ್ದಾಪುರ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಗಾಳಿ ಮಳೆಗೆ ಮರದ ರೆಂಬೆಗಳು ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದಿವೆ. ಮಾಲಂಬಿ, ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net