ಮುರುಘರಾಜೇಂದ್ರ ಶಾಲೆ ವಾರ್ಷಿಕೋತ್ಸವ ಸಮಾರಂಭ

11Rajesh2
Published on

ಚಾಮರಾಜನಗರ: ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಬೇಕು ಎಂದು ಕವಯತ್ರಿ ಲತಾ ರಾಜಶೇಖರ್ ಸಲಹೆ ನೀಡಿದರು.

ತಾಲೂಕಿನ ಮರಿಯಾಲ ಗ್ರಾಮದ ಮುರುಘರಾಜೇಂದ್ರ ಸ್ವಾಮಿ ಸಿಬಿಎಸ್‌ಸಿ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಶಿಕ್ಷಣದೊಂದಿಗೆ ಇತರ ಕಲೆಗಳ ಕಲಿಕೆಗೂ ಪ್ರಾಮುಖ್ಯತೆ ನೀಡಬೇಕು ಎಂದರು.

ಸಂಸ್ಥೆಯ ಶೈಕ್ಷಣಿಕ ಅಧಿಕಾರಿ ದೇವರಾಜು ಚಿಕ್ಕಳ್ಳಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಕೌಶಲಧಾರಿತ ಮತ್ತು ಮೌಲ್ಯಧಾರಿತ ಶಿಕ್ಷಣವನ್ನು ನೀಡುವಲ್ಲಿ ಸಂಸ್ಥೆಯು ವಹಿಸುತ್ತಿರುವ ಶ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಶ್ರೀಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ, ಮಾಡ್ರಳ್ಳಿ ಪಟ್ಟದ ಮಠಾಧ್ಯಕ್ಷ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿದರು. ಪ್ರಥಮ ದರ್ಜೆ ಗುತ್ತಿಗೆದಾರ ಕೆ.ನಾಗರಾಜು ಪುಷ್ಪಾರ್ಚನೆ ನೆರವೇರಿಸಿದರು. ಉದ್ಯಮಿಗಳಾದ ಎ.ಸಿ.ಜಗದೀಶ್, ತ್ರಿಶೂಲ್, ಸಂಸ್ಥೆಯ ಆಡಳಿತಧಿಕಾರಿ ಮಲ್ಲಿಕಾರ್ಜುನಪ್ಪ, ಉಪಾಧ್ಯಕ್ಷ ಕುಮಾರಸ್ವಾಮಿ, ಕಾರ್ಯದರ್ಶಿ ಬಸವಣ್ಣ, ಪ್ರಾಂಶುಪಾ ಎಚ್.ಎಂ ಗಿರೀಶ್ ಮತ್ತು ನೌಕರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net