

ಕಂಪ್ಲಿ: ತುಂಗಭದ್ರಾ ಜಲಾಶಯದಿಂದ ನದಿಗೆ ಶನಿವಾರ 80 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಗಂಗಾವತಿ ಸಂಪರ್ಕಿಸುವ ಸೇತುವೆ ಮುಳುಗಡೆಗೆ ಒಂದಡಿ ಬಾಕಿ ಇದೆ.
ಐತಿಹಾಸಿಕ ಪಂಪಾಪತಿ ದೇವಸ್ಥಾನ ಬಳಿಯ ಉತ್ತರಕ್ರಿಯೆ ಮಂಟಪ ಜಲಾವೃತಗೊಂಡಿದೆ. ತುಂಬಿ ಹರಿಯುತ್ತಿರುವ ನದಿ ನೋಡಲು ಜನರು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೇತುವೆ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಹಸೀಲ್ದಾರ್ ಜೂಗಲ ಮಂಜುನಾಯಕ ತಿಳಿಸಿದ್ದಾರೆ.