ಮುಷ್ಕರದಲ್ಲಿ 1,600 ಪ್ರೌಢಶಾಲಾ ಶಿಕ್ಷಕರು ಭಾಗಿ

pandurang Beldar
Published on

ಬೀದರ್: ವೇತನ, ಭತ್ಯೆ ಪರಿಷ್ಕರಣೆ ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘವು ಮಾ. 1 ರಿಂದ ನಡೆಸಲಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಜಿಲ್ಲೆಯ 1,600 ಸರ್ಕಾರಿ ಪ್ರೌಢಶಾಲಾ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ರಾಜ್ಯ ಬಜೆಟ್‍ನಲ್ಲಿ ನೌಕರರ ವೇತನ ಹಾಗೂ ಭತ್ಯೆ ಪರಿಷ್ಕರಣೆ ಕುರಿತು ಸರ್ಕಾರ ಯಾವುದೇ ಪ್ರಸ್ತಾಪ ಮಾಡಿರುವುದು ನೌಕರರಲ್ಲಿ ಬೇಸರ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘವು ನೌಕರರ ನ್ಯಾಯೋಚಿತ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ನಡೆಸಲಿರುವ ಮುಷ್ಕರದಲ್ಲಿ ನೌಕರರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net