ಮೂರನೇ ದಿನಕ್ಕೆ ಕಾಲಿಟ್ಟ ಪೌರ ನೌಕರರ ಮುಷ್ಕರ

29 ckm 2
ಚಿಕ್ಕಮಗಳೂರು ನಗರಸಭೆ ಎದುರು ಪೌರ ನೌಕರರು ಹಾಗೂ ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.
Published on

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರನೌಕರರು ಹಾಗೂ ಪೌರ ಕಾರ್ಮಿಕರು ಮಂಗಳವಾರದಿAದ ಆರಂಭಿಸಿರುವ ಮುಷ್ಕರ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಪೌರ ಕಾರ್ಮಿಕರು ಊರಿನ ಸ್ವಚ್ಛತೆಗೆ ಬಾರದೇ ಇರುವುದರಿಂದ ನಗರದ ಮೂಲೆ ಮೂಲೆಗಳಲ್ಲಿ ಹಾಗೂ ಆಯಕಟ್ಟಿನ ಜಾಗದಲ್ಲಿ ಕಸದ ರಾಶಿ ತುಂಬಿಕೊAಡಿದೆ. ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಕೃಷ್ಣ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮುಷ್ಕರ ನಡೆಸುವವರಿಗೆ ಬೆಂಬಲ ಸೂಚಿಸಿದರು.

ಈ ವೇಳೆ ಮಾತನಾಡಿದ ಕೆ.ಟಿ.ರಾಧಾಕೃಷ್ಣ, ಪೌರ ಕಾರ್ಮಿಕರು ಒಂದು ದಿನ ಕೆಲಸ ಮಾಡದಿದ್ದರೆ ಇಡೀ ಊರು ಗಬ್ಬೆದ್ದು ನಾರುತ್ತದೆ. ಅಲ್ಲದೆ ನೀರು ಪೂರೈಕೆದಾರರು ಇದೇ ರೀತಿ ಮುಷ್ಕರ ನಡೆಸಿದರೆ ಜನತೆಗೆ ನೀರಿನ ಸಮಸ್ಯೆ ಉಂಟಾಗಲಿದೆ. ಇಂಥ ಕೆಲಸ ಮಾಡುವವರ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಹಾಗೂ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಪೌರ ನೌಕರರ ಸಂಘದ ಅಧ್ಯಕ್ಷ ಅಣ್ಣಯ್ಯ ಮಾತನಾಡಿ, ನಮ್ಮ ಬೇಡಿಕೆ ಈಡೇರಿಸುವ ಸಲುವಾಗಿ ಈ ಹಿಂದೆ ಹಲವಾರು ಬಾರಿ ಸರ್ಕಾರದ ಮುಖ್ಯಮಂತ್ರಿ, ಸಚಿವರುಗಳಿಗೆ ಮನವಿ ಸಲ್ಲಿಸಿದರೂ ಯಾರು ಸ್ಪಂದಿಸುತ್ತಿಲ್ಲ. ಆದ್ದರಿಂದ ಈ ಬಾರಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಮುಷ್ಕರ ಮುಂದುವರೆಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪೌರ ನೌಕರರು, ವಿವಿಧ ಸಂಘಟನೆ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net