‘ಮೂಲ ತರಬೇತಿ ಶಿಬಿರ’ಕ್ಕೆ ಚಾಲನೆ

24mdk11
Published on

ಮಡಿಕೇರಿ:

ರಾಷ್ಟçದ ಅಭಿವೃದ್ಧಿ ಮತ್ತು ಶಿಸ್ತು ಬದ್ಧ ಜೀವನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳು ಸಹಕಾರಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಗಾಂಧಿ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಒಂದು ವಾರಗಳ ಕಾಲ ನಡೆಯುವ ‘ಮೂಲ ತರಬೇತಿ ಶಿಬಿರ’ಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ರಾಷ್ಟçದ ಅಭಿವೃದ್ಧಿ, ಸಂಸ್ಕೃತಿ, ನಾಡು ನುಡಿಯ ಬಗ್ಗೆ ಎಲ್ಲರೂ ಕಲಿಯಲು ಮತ್ತು ಮಕ್ಕಳಿಗೆ ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಅಗತ್ಯ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು, ಪರಿಸರ ಸಂರಕ್ಷಣೆ, ಸಮಯ ಪ್ರಜ್ಞೆ, ಹೀಗೆ ಹಲವು ವಿಚಾರಗಳ ಕುರಿತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಕಾಣಬಹುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ ಯಾವುದೇ ಸಂಕಷ್ಟದ ಪರಿಸ್ಥಿತಿಯಲ್ಲೂ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಪಾತ್ರ ವಹಿಸುತ್ತದೆ. ಪ್ರತಿಯೊಂದು ರಂಗದಲ್ಲಿಯೂ ಮಾನವೀಯತೆಯನ್ನು ಬೆಳೆಸಿಕೊಂಡು ಹೆಚ್ಚಿನ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳಲು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ದೇಶ ಸೇವೆಯೇ ಅತೀ ಮುಖ್ಯವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವುದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವುದು, ಪರಿಸರ ಸಂರಕ್ಷಣೆ, ಕಳೆದು ಹೋಗುವ ಸಂಪನ್ಮೂಲಗಳಾದ ಕುಡಿಯುವ ನೀರು, ವಿದ್ಯುತ್ ಸಂರಕ್ಷಿಸುವುದು, ಶುಚಿತ್ವ, ಪರಿಸರ ಹೀಗೆ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ ಎಂದರು.

ತರಬೇತುದಾರ ಶ್ರೀರಾಮ ಮಾತನಾಡಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ರಾಣಿ ಮಾಚಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಮುತ್ತಪ್ಪ, ಅಯ್ಯಪ್ಪ, ದಮಯಂತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net