ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

CTD 26 STRIKE--00003
Published on

ಚಿತ್ರದುರ್ಗ: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕಾರ‌್ಯಕರ್ತರು ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಸೋಮವಾರ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನ, ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಾಗಿಯೂ ಕೂಡಲೇ ಕಾರ‌್ಯನಿರ್ವಹಿಸುವುದು, ನೇರ ರೈಲು ಮಾರ್ಗ, ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರು, ಉಪನ್ಯಾಸಕರ ಹುದ್ದೆ ಭರ್ತಿ, ವೈದ್ಯರ ನೇಮಕ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಕುಡಿವ ನೀರು, ಮೂಲ ಸೌಲಭ್ಯಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರಮುಖರಾದ ರವಿಕುಮಾರ್, ನಿಂಗರಾಜು, ಹರಿಪ್ರಸಾದ್, ನಾಗರಾಜು, ರೇಷ್ಮಾ, ಮುನ್ನ, ರಮ್ಯಾ, ರಜಿಯಾ, ತರನುಮ್‌ಬಾನು, ಷಾನಾ, ಸೈಯದಾ ಫಾತಿಮಾ, ತ್ರಿವ್ರೇಣಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net