

ಗುಂಡ್ಲುಪೇಟೆ: ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.
ತಾಲೂಕಿನ ಗುರುವಿನಪುರ ಗ್ರಾಮದ ಹಿಂದುಳಿದ ವರ್ಗಗಳ ಬಡಾವಣೆಗೆ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಹಿಂದುಳಿದ ಜನಾಂಗಗಳ ಬಡಾವಣೆಯ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಪೂರೈಸಲು ಹೆಚ್ಚಿನ ಅನುದಾನ ನೀಡಲಾಗಿದೆ. ಸಾಮಾನ್ಯ ವರ್ಗದ ಜನರ ಬೀದಿಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಜನಾಂಗಗಳ ಬೇಡಿಕೆ ಮೇರೆಗೆ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ. ಗ್ರಾಮಾಂತರ ಪ್ರದೇಶಗಳ ಸಂಪರ್ಕ ರಸ್ತೆಗಳ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.
ಗ್ರಾಮದ ಮಹಿಳೆಯರ ಕೋರಿಕೆ ಮೇರೆಗೆ ಕರೊನಾ ಸಂದರ್ಭದಲ್ಲಿ ನಿಲುಗಡೆಯಾಗಿದ್ದ ಬಸ್‌ಗಳ ಸಂಚಾರ ಆರಂಭಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ನಾಳೆಯಿಂದಲೇ ಸಂಚರಿಸಲಿವೆ ಎಂದರು.
ಚಾಮುಲ್ ಮಾಜಿ ನಿರ್ದೇಶಕ ಶಶಿಕುಮಾರ್, ಮುಖಂಡರಾದ ಬಸವಣ್ಣ, ಶಿವಪ್ರಸಾದ್, ಶಿವಪ್ಪ ಹಾಗೂ ಇತರರು ಇದ್ದರು.