

ತುರುವೇಕೆರೆ: ಪಟ್ಟಣದ ನಿವಾಸಿಗಳಿಗೆ ಮೂಲ ಸೌಕರ್ಯಗಳಾದ ಸಿಸಿ ರಸ್ತೆ, ಚರಂಡಿ ಮತ್ತು ಒಳಚರಂಡಿ ನಿರ್ಮಿಸಿಕೊಡಬೇಕೆಂದು ಆಗ್ರಹಿಸಿ ತಾಲೂಕು ದಸಂಸ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಪಟ್ಟಣ ಪಂಚಾಯಿತಿ ಕಚೇರಿ ಮುಂದೆಸೋಮವಾರ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಮಾತನಾಡಿ, ಪಟ್ಟಣದ 9ನೇ ವಾರ್ಡ್ಗೆ ಸೇರಿದ ದಬ್ಬೇಘಟ್ಟ ರಸ್ತೆಯ ಮುತ್ತುರಾಯ ನಗರದ ನಾಗರಿಕರು ಸುಮಾರು ವರ್ಷಗಳಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರಿಗೆ ಮೂಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ರ್ನಿಲಕ್ಷ$್ಯ ವಹಿಸಿದ್ದಾರೆ ಎಂದು ಆರೋಪಿಸಿದರು.
ಪಟ್ಟಣದ ನಾಗರಿಕರು ಸುಮಾರು ಮೂವತೆದು ವರ್ಷಗಳಿಂದ ಪಟ್ಟಣ ಪಂಚಾಯಿತಿಯಿಂದ ಲೈಸೆನ್ಸ್ ಪಡೆದು ಮನೆ ನಿಮಾರ್ಣ ಮಾಡಿಕೊಂಡಿದ್ದು, ಅನೇಕ ಬಾರಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಯವರಿಗೆ ಸಿಸಿ ರಸ್ತೆ, ಚರಂಡಿ ಮತ್ತು ಒಳಚರಂಡಿ ನಿರ್ಮಿಸಿ ಕೊಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು. ಈ ಬಗ್ಗೆ ಸಮಸ್ಯೆ ಬಗೆಹರಿಸದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಪಟ್ಟಣ ಪಂಚಾಯಿತಿ ಅಧಿಕಾರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.