ಮೂಲಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Law
Published on

ಚಿತ್ರದುರ್ಗ: ವಿದ್ಯಾರ್ಥಿ ವಸತಿನಿಲಯದಲ್ಲಿ ಮೂಲಸೌಕರ್ಯ ಕೊರತೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಬಳಿ ನೂರಾರು ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಧವಳಗಿರಿ ಬಡಾವಣೆಯಲ್ಲಿನ ವಿದ್ಯಾರ್ಥಿ ವಸತಿನಿಲಯದಲ್ಲಿ ಮೂಲಸೌಲಭ್ಯ ಇಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.

ನಿಲಯದ ಆವರಣದಲ್ಲಿ ಕೊಳವೆಬಾವಿ ಇಲ್ಲ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಟ್ಯಾಂಕರ್ ಮೂಲಕ ಪೂರೈಕೆ ಆಗುತ್ತಿದ್ದು, ಅದು ಕಲುಷಿತವಾಗಿರುತ್ತದೆ. ಕೊಠಡಿಯೊಳಗೆ ಹಾಸಿಗೆ ಇಲ್ಲದೆ, ಮಲಗಲು ತೊಂದರೆಯಾಗಿದೆ. ಶಾಶ್ವತ ನಿಲಯಪಾಲಕರಿಲ್ಲ. ಇದು ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಅಳಲು ತೋಡಿಕೊಂಡರು.

ನಿಲಯದಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಹಾಸಿಗೆ, ಹೊದಿಕೆ, ಗ್ರಂಥಾಲಯದಲ್ಲಿ ಪುಸ್ತಕ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕೋರಿದರು. ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಶೀಘ್ರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net