ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ

10NGD1
Published on

ನಂಜನಗೂಡು: ನಗರ ವ್ಯಾಪ್ತಿಯಲ್ಲಿ ನಾಗರೀಕರಿಗೆ ಮೂಲಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎಚ್.ಎಸ್.ಮಹದೇವಸ್ವಾಮಿ ತಿಳಿಸಿದರು.

ನಗರದ ಕೆಎಚ್‌ಬಿ ಕಾಲನಿಯಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ನಗರಸಭೆ ವ್ಯಾಪ್ತಿಗೆ ಸೇರಿದ ಕೆ.ಎಚ್.ಬಿ. ಕಾಲನಿಯಲ್ಲಿರುವ ಪಿ.ಡಿ.ಮನೋಹರ್ ಮನೆಯಿಂದ ಮೂರ್ತಿ ಮನೆಯವರೆಗೆ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, 15ನೇ ಹಣಕಾಸು ಯೋಜನೆಯ ಮುಕ್ತ ಅನುದಾನದ ಬಳಸಿಕೊಂಡು 6.94 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ನಗರೋತ್ಥಾನ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ನಗರದ ವಿವಿಧ ಬಡಾವಣೆಗಳಿಗೆ ಮೂಲಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ನಗರಸಭೆ ಉಪಾಧ್ಯಕ್ಷೆ ನಾಗಮಣಿ ಶಂಕರಪ್ಪ, ನಗರಸಭೆ ಸದಸ್ಯರಾದ ಮೀನಾಕ್ಷಿ ನಾಗರಾಜು, ಯೋಗೇಶ್,ಮುಖಂಡರಾದ ಶಂಕರಪ್ಪ, ಪಿ.ಡಿ.ಮನೋಹರ್, ಶ್ರೀಕಂಠ, ನಗರಸಭೆ ಇಇ ಶ್ರೀನಿವಾಸ್, ಎಇಇ ಸುರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net