

ರಾಮದುರ್ಗ: ಪ್ರಸಕ್ತ ಸಾಲಿನಲ್ಲಿ ತಾಲೂಕಿನ ಪ್ರಮುಖ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರದಿಂದ ಸುಮಾರು 70 ಕೋಟಿ ರೂ. ಅನುದಾನ ಮಂಜೂರು ಮಾಡಿಸಿದ್ದೇನೆ. ಮುಂಬರುವ ದಿನಗಳಲ್ಲಿ ಮೂಲಸೌಲಭ್ಯ ಒದಗಿಸಲು ಶ್ರಮಿಸುತ್ತೇನೆ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಪಟ್ಟಣದ ತೇರ ಬಜಾರದಲ್ಲಿ 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಭಾನುವಾರ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವದ್ಧಿ ಕಾಮಗಾರಿ ಪ್ರಾರಂಭಿಸಲಾಗುತ್ತಿದೆ. ಪದಮಂಡಿ, ಸಾಲಾಪುರ, ಮುದೇನೂರ, ಬುದ್ನಿಕುರ್ದ, ಖಾನಪೇಠ ಗ್ರಾಮಗಳ ಜನತೆಗೆ ವಿದ್ಯುತ್ ಒದಗಿಸಲು 110 ಕೆವಿ ವಿದ್ಯುತ್ ಪರಿವರ್ತಕ ಕೇಂದ್ರಗಳ ಸ್ಥಾಪನೆಗೆ ಮಂಜೂರಾತಿ ದೊರೆತಿದೆ. ದೇಶಕ್ಕೆ ಸ್ವಾತಂತ್ರ ತಂದುಕೊಟ್ಟ ಮಹನೀಯರನ್ನು ಸದಾ ಸ್ಮರಿಸಬೇಕು ಎಂದರು.
ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪಟ್ಟಣದ ಅರಮನೆ ಆವರಣದಲ್ಲಿ ಧ್ವಜಾರೋಹಣ ನಂತರ ಆಕರ್ಷಕ ಪಥ ಸಂಚಲನ ಜರುಗಿತು. ನಂತರ ವಿದ್ಯಾರ್ಥಿಗಳಿಂದ ಸಾಂಸತಿಕ ಕಾರ್ಯಕ್ರಮಗಳು ನಡೆದವು. ವಿವಿಧ ೇತ್ರಗಳ ಸಾಧಕರನ್ನು ಸತ್ಕರಿಸಲಾಯಿತು. ಪುರಸಭೆ ಅಧ್ಯೆ ಲಕ್ಷಿ$್ಮ ಕಡಕೋಳ, ಉಪಾಧ್ಯೆ ಸರಿತಾ ಧೂತ್, ತಾಪಂ ಇಒ ಬಸವರಾಜ ಐನಾಪುರ, ಡಿವೆಎಸ್ಪಿ ಚಿದಂಬರ ಮಡಿವಾಳರ, ಸಿಪಿಐ ಐ.ಆರ್. ಪಟ್ಟಣಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ, ೇತ್ರ ಶಿಣಾಧಿಕಾರಿ ಆರ್.ಟಿ. ಬಳಿಗಾರ, ಶಿಣ ಸಂಯೋಜಕ ಆನಂದತೀರ್ಥ ಜೋಶಿ, ಮುಖ್ಯಶಿಕ್ಷಕ ಪಿ.ಡಿ. ಕಾಲವಾಡ ಪುರಸಭೆ ಸದಸ್ಯರು, ತಾಲೂಕುಮಟ್ಟದ ಅಧಿಕಾರಿಗಳು ಇತರರಿದ್ದರು.