ಮೂವರು ಪೇದೆಗಳ ಅಮಾನತು

Published on

ಚಾಮರಾಜನಗರ: ನಗರದ ಪಟ್ಟಣ ಪೊಲೀಸ್ ಠಾಣೆಯ ಮೂವರು ಪೊಲೀಸ್ ಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅಮಾನುತು ಮಾಡಿದ್ದಾರೆ.

ಪಟ್ಟಣ ಠಾಣೆಯ ಪೇದೆಗಳಾದ ಚಂದ್ರೇಗೌಡ, ಮಂಜು, ಚಾಲಕ ಬಸವರಾಜು ಅಮಾನತುಗೊಂಡವರು. ಈ ಕುರಿತು ಎಸ್ಪಿ ಡಾ.ಬಿ.ಟಿ.ಕವಿತಾ ಮಾತನಾಡಿ, ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮೇಲ್ನೋಟಕ್ಕೆ ನಮ್ಮ ಸಿಬ್ಬಂದಿಯ ಪಾಲುದಾರಿಕೆ ಇದೆ ಎನ್ನುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ವಿಚಾರಣೆ ಮಾಡಲು ಆದೇಶ ಮಾಡಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net