ಮೂವರು ಮನೆಗಳ್ಳರ ಬಂಧನ

03Kush01
ಮನೆಗಳ್ಳರ ಬಂಧನ ಬಗ್ಗೆ ಕುಶಾಲನಗರ ಡಿವೈಎಸ್ಪಿ ಕಚೇರಿಯಲ್ಲಿ ಎಸ್ಪಿ ಕೆ.ರಾಮರಾಜನ್ ಮಾಹಿತಿ ನೀಡಿದರು. ಸಹಾಯಕ ಎಸ್ಪಿ ಕೆ.ಎಸ್. ಸುಂದರರಾಜು, ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ವೃತ್ತ ನಿರೀಕ್ಷಕರಾದ ಬಿ.ಜಿ.ಮಹೇಶ್, ಜಿ.ಎನ್.ಶ್ರೀಕಾಂತ, ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್, ಪಿಎಸ್ಸೈಗಳಾದ ಅಪ್ಪಾಜಿ, ಭಾರತಿ, ಶ್ರೀಧರ್, ಲೋಹಿತ್, ಎಎಸ್ಸೈ ವೆಂಕಟೇಶ್, ಗೋಪಾಲ್ ಇತರರಿದ್ದರು.
Published on

ಕುಶಾಲನಗರ: ಕುಶಾಲನಗರ ಪೊಲೀಸರು ಮೂವರು ಮನೆಗಳ್ಳರನ್ನು ಬಂಧಿಸಿ 12 ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣ ಮತ್ತು 3 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು.

ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಎಂ.ಪಿ.ಖಾದರ್ ಎಂಬುವರ ಪುತ್ರ ಎಂ.ಎ.ಇಬ್ರಾಹಿಂ (27), ನಾಪೋಕ್ಲು ಸಮೀಪದ ಕೊಕೇರಿ ಗ್ರಾಮದ ಸುರೇಶ್ ಎಂಬುವರ ಪುತ್ರ ಸುದೀಪ್ (21) ಹಾಗೂ ಮಡಿಕೇರಿಯ ಅಜಾದ್‌ನಗರದ ಎಂ.ಎಂ.ಮೊಹಮ್ಮದ್ ಎಂಬುವರ ಪುತ್ರ ಎಂ.ಎಂ.ವಾಸಿಂ (29) ಬಂಧಿತ ಆರೋಪಿಗಳು. ಇವರೊಂದಿಗೆ ಕಳ್ಳತನದಲ್ಲಿ ಭಾಗಿಯಾಗಿದ್ದ ಇನ್ನೂ ಮೂವರು ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಶುಕ್ರವಾರ ಕುಶಾಲನಗರದ ಡಿವೈಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆರೋಪಿಗಳ ಬಂಧನದಿಂದ ಕುಶಾಲನಗರ ವ್ಯಾಪ್ತಿಯ 2, ನಾಪೋಕ್ಲು ವ್ಯಾಪ್ತಿಯ 2, ವೀರರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ 1 ಪ್ರಕರಣ ಭೇದಿಸಲಾಗಿದೆ ಎಂದು ತಿಳಿಸಿದರು.

ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದಲ್ಲಿ ಪಿಎಸ್ಸೈಗಳಾದ ಅಪ್ಪಾಜಿ, ಭಾರತಿ, ಶ್ರೀಧರ್, ಲೋಹಿತ್, ಎಎಸ್ಸೈ ವೆಂಕಟೇಶ್, ಗೋಪಾಲ್, ಗಣಪತಿ, ಪೇದೆಗಳಾದ ಸತೀಶ್, ಮಂಜುನಾಥ್, ದಯಾನಂದ, ನಾಗರಾಜ್, ಸುಧೀಶ್ ಕುಮಾರ್, ಪ್ರಕಾಶ್, ಪ್ರವೀಣ್, ಸಂದೇಶ್, ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವರಿಗೆ ಇಲಾಖೆ ವತಿಯಿಂದ ನಗದು ಬಹುಮಾನ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net