ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

28-GPT-2
Published on

ಗುಂಡ್ಲುಪೇಟೆ: ಚಾಮರಾಜನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಾಲೂಕಿನ ತೆರಕಣಾಂಬಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರಾದ ಅಮೂಲ್ಯ ತೆಲುಗು ಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಯೋಗಿತಾ ತಮಿಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ, 10 ತರಗತಿಯ ಅಮೂಲ್ಯ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ಪ್ರಾಂಶುಪಾಲ ಮಹದೇವ ಪ್ರಸಾದ್ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net