ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ರಂಗಸ್ವಾಮಿ ಅಧಿಕಾರ ಸ್ವೀಕಾರ

mysore
Published on

ಮೈಸೂರು: ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಡ್ಯ ರಂಗಸ್ವಾಮಿ ಸೋಮವಾರ ಅಧಿಕಾರ ಸ್ವೀಕರಿಸಿದರು.

ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ ಅವರು, ಈ ಸ್ಥಾನಕ್ಕೆ ಇತ್ತೀಚಿಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿರುವ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರವನ್ನು ವಹಿಸಿಕೊಂಡರು.

ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ನನ್ನ ಮೇಲೆ ಭರವಸೆ ಹಾಗೂ ನಂಬಿಕೆ ಇಟ್ಟು ಈ ದೊಡ್ಡ ಸ್ಥಾನ ನೀಡಿದ್ದಾರೆ. ಸರ್ಕಾರ ಹಾಗೂ ಸಿದ್ದರಾಮಯ್ಯ ಹೆಸರಿಗೆ ಧಕ್ಕೆ ಆಗದಂತೆ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದರು.

ಸಮಸ್ಯೆ ಪರಿಹರಿಸುವೆ: ಮೃಗಾಲಯ ಪ್ರಾಧಿಕಾರದಲ್ಲಿ ಹಲವು ಸಮಸ್ಯೆಗಳಿವೆ. ಕೂಡಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವುದು ನನ್ನ ಮುಖ್ಯ ಗುರಿ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್ ಮಾತನಾಡಿ, ಪಕ್ಷದಲ್ಲಿ ದುಡಿದ ಒಬ್ಬ ಪ್ರಾಮಾಣಿಕ ವ್ಯಕ್ತಿಯನ್ನು ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಪಕ್ಷಕ್ಕೆ ಗೌರವ ತಂದುಕೊಟ್ಟಿದೆ. ರಂಗಸ್ವಾಮಿ ತಮ್ಮ ಅಧಿಕಾರ ಬಳಸಿಕೊಂಡು ಮೃಗಾಲಯ ಪ್ರಾಧಿಕಾರಕ್ಕೆ ಹೊಸ ಯೋಜನೆ ತಂದು ನೂತನ ಇತಿಹಾಸ ಸೃಷ್ಟಿ ಮಾಡಲಿ ಎಂದು ಶುಭ ಹಾರೈಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಬಸವರಾಜ್, ಕಾಂಗ್ರೆಸ್ ಮುಖಂಡರಾದ ಸುರೇಶ್ ಬಾಬು, ಮಹದೇವು, ಕುಮಾರ್ ಬಸವರಾಜ್, ರವಿಪ್ರಸಾದ್, ಸುತ್ತೂರು ಸೋಮಣ್ಣ, ಪರಶಿವಮೂರ್ತಿ, ನಟರಾಜು, ಜಗದೀಶ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net