ಮೃತ ಪೇದೆಯ ಕುಟುಂಬಕ್ಕೆ ಧನ ಸಹಾಯ

27 HANUR 5
Published on

ಹನೂರು: ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಪೇದೆ ಪರಶುರಾಮ್ ಅವರ ಕುಟುಂಬಕ್ಕೆ ಭಾನುವಾರ ಪೊಲೀಸ್ ಬಳಗ 1.5 ಲಕ್ಷ ರೂ. ಧನ ಸಹಾಯ ನೀಡಿದೆ.

ರಾಯಚೂರು ಜಿಲ್ಲೆ, ಲಿಂಗನಸೂರು ತಾಲೂಕಿನ ಹಾಲಬಾವಿ ಗ್ರಾಮದ ಪೇದೆ ಪರಶುರಾಮ್ ಅವರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಶನಿವಾರ ಹೃದಯಾಘಾತದಿಂದ ನಿಧನರಾದರು. ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ ಕವಿತಾ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂತಿಮ ದರ್ಶನ ಪಡೆದು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದರು. ಮೃತದೇಹವನ್ನು ಸ್ವ ಗ್ರಾಮಕ್ಕೆ ಕೊಂಡೊಯ್ಯಲು ಇಲಾಖೆಯ ವತಿಯಿಂದಲೇ ವ್ಯವಸ್ಥೆ ಮಾಡಲಾಗಿತ್ತು. ಹಾಗೆಯೇ ಠಾಣೆಯ ಎಎಸೈ ಗುರುಸ್ವಾಮಿ, ಪೇದೆಗಳಾದ ಗಿರೀಶ್, ರಾಜು, ಕರಿಯಪ್ಪ ಸೇರಿದಂತೆ ಇತರೆ ಸಿಬ್ಬಂದಿ ಮೃತರ ಸ್ವ ಗ್ರಾಮಕ್ಕೆ ತೆರಳಿ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಸಂಗ್ರಹಿಸಿದ್ದ 1,56,800 ರೂ.ಗಳನ್ನು ಮೃತರ ತಾಯಿಗೆ ಹಸ್ತಾಂತರಿಸುವುದರ ಮೂಲಕ ಮಾನವೀಯತೆ ಮೆರೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net