ಮೃತರ ಕುಟುಂಬಕ್ಕೆ ಪರಿಹಾರ ನೀಡಿ

07 Jaggu 9-Web
ಕರೊನಾದಿಂದ ಮೃತಪಟ್ಟ ಕಾರ್ಯಕರ್ತೆಯರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟಿಸಿದರು. ಮಂದಾ ನೇವಗಿ, ಸಂಧ್ಯಾ ಕುಲಕರ್ಣಿ, ಸುಮಿತಾ ತುಮರೆ, ಮೀನಾಕ್ಷಿ ತಪಡೆ, ಅನಿತಾ ಪಾಟೀಲ, ಕೃಷ್ಣಾವತಿ ತೋಪನಕಟ್ಟಿ ಇದ್ದರು.
Published on

ಬೆಳಗಾವಿ: ಕರೊನಾದಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ ಪರಿಹಾರ ನೀಡಬೇಕು. ಅಲ್ಲದೆ, ಸರ್ವೇ ಕಾರ್ಯಕ್ಕೆ ನಿಯೋಜಿಸಿರುವ ನಮಗೆ ಸೌಲಭ್ಯ, ಸುರಕ್ಷತೆ ನೀಡಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು, ಎಐಟಿಯುಸಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಂಘಟನೆಯ ತಾಲೂಕಾಧ್ಯಕ್ಷೆ ಮಂದಾ ನೇವಗಿ ಮಾತನಾಡಿ, ಜಿಲ್ಲೆಯಲ್ಲಿ ಕರೊನಾ ಸರ್ವೇ ಕಾರ್ಯ, ಆರೋಗ್ಯ ರಕ್ಷಣೆಗೆ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸುರಕ್ಷತೆ ಇಲ್ಲ. ಕರೊನಾದಿಂದ ಮೃತಪಟ್ಟರೆ 30 ಲಕ್ಷ ರೂ. ಪರಿಹಾರದ ಭರವಸೆ ನೀಡಿದ್ದರೂ ಇದುವರೆಗೆ ಒಂದೇ ಒಂದು ರೂಪಾಯಿ ಸಂದಾಯವಾಗಿಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರನ್ನು ಮರೆತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಅಂಗನವಾಡಿ ಕಾರ್ಯಕರ್ತೆಯರಿಗೆ ನ್ಯಾಯಬದ್ಧ ಪರಿಹಾರ, ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಕೆಲಸ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು. ಸಂಧ್ಯಾ ಕುಲಕರ್ಣಿ, ಸುಮಿತಾ ತುಮರೆ, ಮೀನಾಕ್ಷಿ ತಪಡೆ, ಅನಿತಾ ಪಾಟೀಲ, ಕೃಷ್ಣಾವತಿ ತೋಪನಕಟ್ಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net