ಮೆಡಿಕಲ್ ಕಾಲೇಜಿನಲ್ಲಿ ಗಣಪತಿ ದರ್ಶನ

bkt-8-2
ಬಾಗಲಕೋಟೆ ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ಪ್ರತಿಷ್ಠಾಪಿಸಲಾದ ಗಣಪತಿಯನ್ನು ಮಾಜಿ ಶಾಸಕ ವೀರಣ್ಣ ಚರಂತಿಮಠ ದರ್ಶನ ಮಾಡಿದರು. ವೈದ್ಯಕೀಯ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಹಾಸ್ಟೆಲ್ ಕಮಿಟಿಯ ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಹಿರೇಮಠ (ಚಿತ್ತರಗಿ), ಕಟ್ಟಡ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ಪ್ರಾಚಾರ್ಯರು ಮತ್ತು ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಭುವನೇಶ್ವರಿ ಯಳಮೇಲಿ ಇತರರು ಇದ್ದರು.
Published on

ಬಾಗಲಕೋಟೆ: ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ. ಚರಂತಿಮಠ ಶನಿವಾರ ವೈದ್ಯ ವಿದ್ಯಾರ್ಥಿಗಳಿಂದ ಪ್ರತಿಷ್ಠಾಪಿಸಲಾದ ಗಣಪತಿ ದರ್ಶನ ಮಾಡಿದರು.

ಈ ಬಾರಿ ಬಹಳ ಅದ್ಧೂರಿಯಾಗಿ ಗಣೇಶ ಉತ್ಸವವನ್ನು ಆಚರಿಸಲಾಗುತ್ತಿರುವ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿ(ನಿ)ಗಳ ತಂಡ ಮೆಡಿಕಲ್ ಕಾಲೇಜಿನ ಆಡಳಿತ ಕಚೇರಿಯ ವಿಶಾಲ ಆವರಣದಲ್ಲಿ ನಿರ್ಮಿಸಲಾಗಿರುವ ಜ್ಯೋತಿರ್ಲಿಂಗ ಪ್ರದರ್ಶನ ಮತ್ತು ವಿವಿಧ ಧಾರ್ಮಿಕ ಸ್ಥಬ್ಧಚಿತ್ರಗಳನ್ನು ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು. ಪ್ರತಿದಿನ ಬೆಳಗ್ಗೆ ೯ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ಸಾರ್ವಜನಿಕರು ಸರದಿಯಲ್ಲಿ ಬಂದು ವಿಶೇಷ ಅಲಂಕಾರದ ಗಣಪತಿ ವೀಕ್ಷಣೆ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ವೈದ್ಯಕೀಯ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಹಾಸ್ಟೆಲ್ ಕಮಿಟಿಯ ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಹಿರೇಮಠ (ಚಿತ್ತರಗಿ), ಕಟ್ಟಡ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ಪ್ರಾಚಾರ್ಯರು ಮತ್ತು ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಭುವನೇಶ್ವರಿ ಯಳಮೇಲಿ, ಡಾ.ನವೀನ ಚರಂತಿಮಠ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net