ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

sucide pic
Published on

ಚಿತ್ರದುರ್ಗ: ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಹಾಸನ ಮೂಲದ ಮನೋಜ್(24)ಎಂದು ಗುರುತಿಸಲಾಗಿದೆ. ನಗರದ ಬಸವೇಶ್ವರ ಮೆಡಿಕಲ್ ಕಾಲೇಜು 2ನೇ ವರ್ಷದ ವಿದ್ಯಾರ್ಥಿಯಾ ಗಿದ್ದ ಈತ, ತನ್ನ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡಿದ್ದಾನೆ. ಸಾವಿಗೆ ಶರಣಾಗುವ ಮುನ್ನ ನನ್ನ ಸಾವಿಗೆ ನಾನೇ ಕಾರಣ ಎಂದು ಡೆ ತ್‌ನೋಟ್ ಬರೆದಿಟ್ಟಿದ್ದಾನೆ. ಓದುವ ಒತ್ತಡದಿಂದ ಹೀಗೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದ್ದು,ಕೋಟೆ ಪೊಲೀಸ್ ಠಾಣೆ ಪೊಲೀಸ ರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net