ಮೆಣಸಗೆರೆ ಅಭಿವೃದ್ಧಿಗೆ ಸಹಕಾರ

5KMD-1
ಮೆಣಸಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ದುರಸ್ತಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಚಾಲನೆ ನೀಡಿದರು. ಹಾಗಲಹಳ್ಳಿ ಬಸವರಾಜೇಗೌಡ, ಬಿ.ಗಿರೀಶ್, ಭರತೇಶ್, ಸೋಮು, ರಾಜು, ಮಧುಸೂದನ್, ರವಿ ಇದ್ದರು.
Published on

ಕೆ.ಎಂ.ದೊಡ್ಡಿ: ಗ್ರಾಮದ ಅಭಿವೃದ್ಧಿಗೆ ನಿರಂತರವಾಗಿ ಗ್ರಾಮಸ್ಥರೊಂದಿಗೆ ಕೈಜೋಡಿಸುತ್ತೆನೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಭರವಸೆ ನೀಡಿದರು.

ಸಮೀಪದ ಮೆಣಸಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಈ ಹಿಂದೆ ಗ್ರಾಮದ ಅಭಿವೃದ್ಧಿಗೆ 45 ಲಕ್ಷ ರೂ. ಅನುದಾನ ನೀಡಿದ್ದೆ. ಅದರಂತೆ ಗ್ರಾಮಸ್ಥರ ಮನವಿ ಮೇರೆಗೆ 40 ವರ್ಷಗಳ ಹಳೆಯ ಶಾಲಾ ಕಟ್ಟಡ ದುರಸ್ತಿಗೆ ಮನವಿ ಮಾಡಿದ್ದು ಈ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯಕ್ಕೆ ಹಣ ಬಿಡುಗಡೆಗೊಳಿಸಿದ್ದೇನೆ ಎಂದರು.

ಶಾಲೆಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮಟ್ಟದಲ್ಲಿ ಅನುದಾನ ಬಿಡುಗಡೆಗೊಳಿಸಲು ಶ್ರಮಿಸುತ್ತೇನೆ. ಗ್ರಾಮಸ್ಥರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಕಟಿಬದ್ಧನಾಗುತ್ತೇನೆ ಎಂದು ತಿಳಿಸಿದರು.

ಕಾವೇರಿ ನೀರಾವರಿ ನಿಗಮದ ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಹಾಗಲಹಳ್ಳಿ ಬಸವರಾಜೇಗೌಡ, ತಾ.ಪಂ ಮಾಜಿ ಸದಸ್ಯರಾದ ಬಿ.ಗಿರೀಶ್, ಭರತೇಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೋಮು, ಗ್ರಾ.ಪಂ ಮಾಜಿ ಅಧ್ಯಕ್ಷ ರಾಜು, ಸದಸ್ಯರಾದ ಮಧುಸೂದನ್, ರವಿ, ಡೇರಿ ಮಾಜಿ ಅಧ್ಯಕ್ಷ ಜಯರಾಮು, ಮುಖಂಡರಾದ ಕೆ.ಕಬ್ಬಾಳಯ್ಯ, ಅಪ್ಪಾಜಿ, ಆಲೂರಯ್ಯ, ನಂಜುಂಡಸ್ವಾಮಿ, ಮಾಧು, ಪ್ರಕಾಶ್, ಸತೀಶ್, ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net