ಮೆರವಣಿಗೆಯಲ್ಲಿ ಸಾಗಿದ ಮುಸ್ಲಿಮರು

22ss1meravanige
ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಮರು ಶನಿವಾರಸಂತೆ ಜಾಮಿಯಾ ಮಸಿದಿಯಿಂದ ಈದ್ಗಾ ಮೈದಾನದವರೆಗೆ ಮೆರವಣಿಗೆ ತೆರಳಿದರು.
Published on

ಶನಿವಾರಸಂತೆ: ಹನಫಿ ಜಾಮಿಯಾ ಮಸೀದಿ ವತಿಯಿಂದ ರಂಜಾನ್ ಹಬ್ಬವನ್ನು ಶನಿವಾರ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಪ್ರಯುಕ್ತ ಮುಸ್ಲಿಮರು ಪಟ್ಟಣದ ಹನಫಿ ಜಾಮಿಯಾ ಮಸೀದಿಯಿಂದ ಕೆಆರ್‌ಸಿ ವೃತ್ತದಲ್ಲಿರುವ ಈದ್ಗಾ ಮೈದಾನದವರೆಗೆ ಮೆರವಣಿಗೆಯಲ್ಲಿ ಸಾಗಿದರು. ಬಳಿಕ ಮಸೀದಿಯಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಆಲಿಂಗನ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net