ಮೆಲ್ಬ್ರೋ ಸಕ್ಕರೆ ಕಾರ್ಖಾನೆ ಕಾರ್ಯಾರಂಭ

bkt-9-1
ಮೆಲ್ಬ್ರೋ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಕಾರ್ಯಕ್ಕೆ ಶುಕ್ರವಾರ ಹರ-ಗುರು ಮೂರ್ತಿಗಳು, ಜನಪ್ರತಿನಿಧಿಗಳು, ಗಣ್ಯರು ವಿದ್ಯುಕ್ತವಾಗಿ ಚಾಲನೆ ನೀಡಿದರು.
Published on

ಬಾಗಲಕೋಟೆ: ತಾಲೂಕಿನ ಶಿರೂರ-ಬೆನಕಟ್ಟಿ ಮಧ್ಯದಲ್ಲಿ ನೂತನವಾಗಿ ಸ್ಥಾಪನೆಗೊಂಡಿರುವ ಮೆಲ್ಬ್ರೋ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಕಾರ್ಯಕ್ಕೆ ಶುಕ್ರವಾರ ಹರ-ಗುರು ಮೂರ್ತಿಗಳು, ಜನಪ್ರತಿನಿಧಿಗಳು, ಗಣ್ಯರು ವಿದ್ಯುಕ್ತವಾಗಿ ಚಾಲನೆ ನೀಡಿದರು.
260 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾರ್ಖಾನೆ ಪ್ರಾರಂಭೋತ್ಸವದ ಅಂಗವಾಗಿ ಬೆಳಗ್ಗೆ ಪೂಜಾ ಕೈಂಕರ್ಯಗಳು ನೆರವೇರಿದವು. ಮಧ್ಯಾಹ್ನ 12-30 ಗಂಟೆಗೆ ಬಾಗಲಕೋಟೆ ಚರಂತಿಮಠದ ಪ್ರಭು ಸ್ವಾಮೀಜಿ, ಎರೆಹೊಸಳ್ಳಿಯ ವೇಮನಾನಂದ ಶ್ರೀಗಳು, ಕಮತಗಿಯ ಹೊಳೆಹುಚ್ಚೇಶ್ವರ ಶ್ರೀಗಳು, ಗಂಗಾಪೂರದ ಮರುಳಶಂಕರ ಸ್ವಾಮೀಜಿ, ಕಲ್ಮಠದ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೇನ್ ಕ್ಯಾರಿಯರ್ಗೆ ಕಬ್ಬನ್ನು ನೀಡುವ ಮೂಲಕ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಆಂಧ್ರಪ್ರದೇಶದ ಹಣಕಾಸು ಸಚಿವ ಬಿ.ರಾಜೇಂದ್ರನಾಥರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವದಿ, ಪಿ.ಎಚ್.ಪೂಜಾರ, ಹನಮಂತ ನಿರಾಣಿ, ಗಣೇಶ ಹುಕ್ಕೇರಿ, ಮಾಜಿ ಸಂಸದರಾದ ಆರ್.ಎಸ್.ಪಾಟೀಲ, ಎಚ್.ವೈ.ಮೇಟಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಮಾಜಿ ಶಾಸಕರಾದ ಎಸ್.ಜಿ.ನಂಜಯ್ಯನಮಠ, ಜೆ.ಟಿ.ಪಾಟೀಲ, ರಾಜಶೇಖರ ಶೀಲವಂತ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಎಸ್.ಆರ್.ಮೆಳ್ಳಿ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ನಂದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ, ಇಂಡಿಯನ್ ಕೇನ್ ಪಾವರ್ ಲಿಮಿಟೆಡ್ ಅಧ್ಯಕ್ಷ ಮಲ್ಲಿಕಾರ್ಜನ ಶಾಮನೂರ, ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಜಗದೀಶ ಗುಡಗುಂಟಿ, ರನ್ನ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಮಣ್ಣ ತಳೇವಾಡ, ಬಾಲಾಜಿ ಶುಗರ್ಸ ಅಧ್ಯಕ್ಷ ಹನಮಂತಗೌಡ ಪಾಟೀಲ, ನಿರ್ದೇಶಕ ಎಚ್.ಎಲ್.ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಂದು ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಮೆಲ್ಬ್ರೋ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಿವಾನಂದ ಮೆಳ್ಳಿಗೇರಿ, ವ್ಯವಸ್ಥಾಪಕ ನಿರ್ದೇಶಕ ಸಂತೋಷ ಮೆಳ್ಳಿಗೇರಿ, ನಿರ್ದೇಶಕ ಅಭಯ ಸರನಾಯಕ, ನಿವೃತ್ತ ಕಷ್ಟಮ್ ಅಕಾರಿ ಆರ್.ಎಸ್.ಪಾಟೀಲ, ಸಂಜಯ ಸರನಾಯಕ, ಜಗದೀಶ ಮೆಳ್ಳಿಗೇರಿ, ರಂಗಪ್ಪ ಮಳ್ಳಿ, ನಿಂಗನಗೌಡ ಪಾಟೀಲ, ಮಹೇಶ ಕಕರಡ್ಡಿ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net