ಮೆಲ್ಲಹಳ್ಳಿ ಶಾಲೆಯಲ್ಲಿ ಪ್ರಾರಂಭೋತ್ಸವ ಸಂಭ್ರಮ

20
Published on

ಮೈಸೂರು: ತಾಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮ ಬುಧವಾರ ನಡೆಯಿತು.
ಶಾಲೆಯ ದ್ವಾರವನ್ನು ತಳಿರು ತೋರಣಗಳಿಂದ ಅಲಂಕರಿಸಿ, ಪಾಲಕರೊಂದಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಲಾಬಿ ಹೂ ನೀಡಿ ಸ್ವಾಗತಿಸಿದರು. ಮಧ್ಯಾಹ್ನ ಬಿಸಿಯೂಟಕ್ಕೆ ತರಕಾರಿ ಬಾತ್, ಕೇಸರಿ ಬಾತ್ ನೀಡಲಾಯಿತು.
ಮೆಲ್ಲಹಳ್ಳಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ದೀಪು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಮಂಚಪ್ಪ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಟಿ. ಸತೀಶ್ ಜವರೇಗೌಡ, ಪ್ರಭಾರ ಮುಖ್ಯ ಶಿಕ್ಷಕಿ ಕೆ.ವಿ. ಪುಷ್ಪಲತಾ, ಟಿಜಿಟಿ ಶಿಕ್ಷಕರಾದ ಸುನೀಲ್ ಕುಮಾರ್, ರಂಗಸ್ವಾಮಿ, ಹಿರಿಯ ಶಿಕ್ಷಕಿ ಬಿ.ಎಲ್. ಭಾಗ್ಯಾ, ಕಲ್ಪನಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net