ಮೆಳ್ಳಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ವಿಜಯೋತ್ಸವ

13KMD-1
ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುಡಿಗೆರೆ ಗ್ರಾಮದಲ್ಲಿ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
Published on

ಕೆ.ಎಂ.ದೊಡ್ಡಿ: ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಮೀಪದ ಮೆಳ್ಳಹಳ್ಳಿ ಗ್ರಾಮದಲ್ಲಿ ಕೈ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಗ್ರಾಪಂ ಸದಸ್ಯ ವಿನಯ್ ಹೊನ್ನೇಗೌಡ ಮಾತನಾಡಿ, ಕಳೆದ 15 ವರ್ಷಗಳಿಂದ ಮದ್ದೂರಿನಲ್ಲಿ ಕಾಂಗ್ರೆಸ್‌ಗೆ ಅಧಿಕಾರವಿಲ್ಲದೆ ನೋವುಂಟಾಗಿತ್ತು. ಇದೀಗ ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ್ ಗೆಲುವು ಮದ್ದೂರು ಕ್ಷೇತ್ರದಲ್ಲಿ ನವ ಮನ್ವಂತರಕ್ಕೆ ನಾಂದಿ ಉಂಟು ಮಾಡಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಎಂ.ಪಿ.ರವಿಚಂದ್ರ, ಮುಖಂಡರಾದ ತಮ್ಮಣ್ಣ, ಕುಮಾರ ಸೇರಿದಂತೆ ಹಲವರಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ್ ಗೆಲುವು ಸಾಧಿಸುತ್ತಿದ್ದಂತೆ ಗುಡಿಗೆರೆ ಗ್ರಾಮದಲ್ಲಿ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಮದ್ದೂರು ಕ್ಷೇತ್ರದ ಕಾಂಗ್ರೆಸ್ ದಲಿತ ಮುಖಂಡ ಪ್ರಸಾದ್ ಸೇರಿದಂತೆ ಗ್ರಾಮದ ಯುವ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net