

ಸುಂಟಿಕೊಪ್ಪ: ಕೊಡಗು ಜಿಲ್ಲಾ ರೊಮನ್ ಕ್ಯಾಥೋಲಿಕ್ ಅಸೋಸಿಯಷನ್ ಹಾಗೂ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಹಯೋಗದಲ್ಲಿ ಮೇ 10 ಮತ್ತು 11ರಂದು ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಸುಂಟಿಕೊಪ್ಪ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.
ಇತ್ತೀಚೆಗೆ ಸುಂಟಿಕೊಪ್ಪ ಸಂತಮೇರಿ ಶಾಲಾ ಸಭಾಂಗಣದಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಶೋಸಿಯನ್ ಅಧ್ಯಕ್ಷ ಜಾನ್ಸನ್ ಪಿಂಠೋ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾ ಮಟ್ಟದ ರೋಮನ್ ಕ್ಯಾಥೋಲಿಕ್ 14ನೇ ವರ್ಷದ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರಿಗೆ ಥ್ರೋಬಾಲ್, ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆ ನಡೆಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಸ್ಥಾಪಕ ಅಧ್ಯಕ್ಷ ವಿ.ಎ.ಲಾರೆನ್ಸ್, ಉಪಾಧ್ಯಕ್ಷ ಜೋಕಿಂವಾಸ್, ಖಜಾಂಜಿ ಜೇಮ್ಸ್ ಡಿಸೋಜ, ಕ್ರೀಡಾ ಕಾರ್ಯದರ್ಶಿ ಪ್ರಭು, ದಾಸ್, ನಿಕಟಪೂರ್ವ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ, ಪಿಲಿಫ್‌ವಾಸ್, ಅಂತೋಣಿ ಡಿಸೋಜ, ಸುಂಟಿಕೊಪ್ಪ ದೇವಾಲಯ ಪಾಲನಾ ಸಮಿತಿ ಕಾರ್ಯದರ್ಶಿ ಡೆನ್ನಿಸ್ ಡಿಸೋಜ, ಪಿ.ಎಫ್.ಸಬಾಸ್ಟೀನ್, ರೋಸ್‌ಮೇರಿ ರಾಡ್ರಿಗಸ್, ಗ್ರೇಸಿ ಮತ್ತಿತರರು ಇದ್ದರು.