ಮೇ 14 ರಂದು ಬೃಹತ್ ಜನ ಹೋರಾಟ

B.Ravi
Published on

ಚಾಮರಾಜನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ, ಸಾರ್ವಜನಿಕ ಆರೋಗ್ಯ ಸೇವೆಗಳ ಕುಸಿತ, ನಿರಂತರವಾಗಿ ಶಿಕ್ಷಣ ವ್ಯಾಪಾರೀಕರಣ, ರೈತ ಮತ್ತು ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮೇ 14 ರಂದು ಬೆಂಗಳೂರಿನಲ್ಲಿ ಬೃಹತ್ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಯುಸಿಐ ರಾಜ್ಯ ಸಮಿತಿ ಸದಸ್ಯ ಬಿ.ರವಿ ಅವರು ತಿಳಿಸಿದರು.

ಈ ಹೋರಾಟಕ್ಕೆ ಎಲ್ಲಾ ಜಿಲ್ಲೆಗಳಿಂದಲೂ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ಮೈಸೂರು-ಚಾಮರಾಜನಗರ ವಿಭಾಗದಿಂದ 500 ಜನರು ಭಾಗಿಯಾಗಲಿದ್ದಾರೆ. ಎಸ್‌ಯುಸಿಐಸಿ ಕೇಂದ್ರ ಸಮಿತಿ ಸದಸ್ಯ ಕೆ.ರಾಮಕೃಷ್ಣ, ರಾಜ್ಯ ಸೆಕ್ರೆಟೇರಿಯಟ್ ಸದಸ್ಯ ರಾಮಾಂಜನಪ್ಪ ಮುಖ್ಯ ಭಾಷಣ ಮಾಡುವರು. ರಾಜ್ಯ ಕಾರ್ಯದರ್ಶಿ ಕೆ.ಉಮಾ ಅಧ್ಯಕ್ಷತೆ ವಹಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ನರೇಗಾ ಕೂಲಿಯನ್ನು ಹೆಚ್ಚಳ ಮಾಡಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಖಾತ್ರಿಪಡಿಸಬೇಕು. ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಕೈಬಿಡಬೇಕು. ಮೇಟ್ರೊ ದರವನ್ನು ಹಿಂಪಡೆಯಬೇಕು. ಮಾನವ ಮತ್ತು ಕಾಡುಪ್ರಾಣಿಗಳ ಸಂಘರ್ಷವನ್ನು ತಡೆಗಟ್ಟಬೇಕು ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ ಮಾಡಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಎಸ್‌ಯುಸಿಐ ಸಂಘಟನೆಯ ರಮಾದೇವಿ, ಯಶೋಧರ್, ಚಂದ್ರಶೇಖರ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net