ಚಾಮರಾಜನಗರ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ದಿ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗದ ಅಭಿಯಂತರರಿಗೆ ಒ ಅಂಡ್ ಎಂ ಪಾಲಿಸಿ, ಸರ್ವೀಸ್ ಲೆವಲ್ ಬೆಂಚ್ ಮಾರ್ಕ್ (ಎಸ್.ಎಲ್.ಬಿ) ವಿ.ಡಬ್ಲ್ಯೂ.ಎಸ್.ಸಿ ನಡಾವಳಿ ಪ್ರತ್ಯೇಕ ನೀರಿನ ಖಾತೆ ನಿರ್ವಹಣೆ, 24*7 ನೀರು ಸರಬರಾಜು ಗ್ರಾಮ ಘೋಷಣೆ, ಮಾದರಿ ಗ್ರಾಮ ಪಂಚಾಯಿತಿಗಳ ಘೋಷಣೆ ಸಂಬಂಧ ಕಾರ್ಯಗಾರವನ್ನು ಮೇ 13 ರಿಂದ 16ರವರೆಗೆ ಆಯಾ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ತಾಲೂಕಿನ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿದೆ. ಮೇ 13ರಂದು ಚಾಮರಾಜನಗರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಚಾಮರಾಜನಗರ ತಾಲೂಕಿನ 43 ಗ್ರಾಮ ಪಂಚಾಯಿತಿಗಳು, ಮೇ 14ರಂದು ಗುಂಡ್ಲುಪೇಟೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುಂಡ್ಲುಪೇಟೆ ತಾಲೂಕಿನ 34 ಗ್ರಾಮ ಪಂಚಾಯಿತಿಗಳು, ಮೇ 15ರಂದು ಕೊಳ್ಳೇಗಾಲ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕಿನ 28 ಗ್ರಾಮ ಪಂಚಾಯಿತಿಗಳು ಹಾಗೂ ಮೇ 16ರಂದು ಹನೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹನೂರು ತಾಲೂಕಿನ 25 ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದಂತೆ ತರಬೇತಿ ಕಾರ್ಯಗಾರ ನಡೆಯಲಿದೆ.
ಆಯಾ ದಿನದಂದು ಬೆಳಿಗ್ಗೆ 10 ಗಂಟೆಗೆ ತರಬೇತಿ ಆರಂಭವಾಗಲಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.